ಕಲಬುರ್ಗಿ: ರಾಮನಗರ ಜಿಲ್ಲೆಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಯಡ್ರಾಮಿ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣದ ವತಿಯಿಂದ ನಗರದ ಶರಣಗೌಡ ವೃತ್ತದಿಂದ ತಾಲೂಕ ದಂಡಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಯಿತು ಅತ್ಯಾಚಾರ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಆರೋಪಿಗಳಿಗೆ ಉಗ್ರವಾದ ಶಿಕ್ಷೆ ನೀಡಬೇಕು ಎಂದು ಹೇಳಿದರು ತಾಲೂಕ ದಂಡಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಸಾಹೇಬಗೌಡ ದೇಸಾಯಿ ಕೊಲೆ ಪ್ರಕರಣ ಮಾಡುತ್ತಿರುವ.ತನಿಖಾಧಿಕಾರಿಗಳು ರಾಜಕಾರಣಿಗಳ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಿ.
ಅತ್ಯಾಚಾರ ಮಾಡಿ ಕೊಲೆ ಮಾಡಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ನೊಂದ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ರಾಜ್ಯ ಸರ್ಕಾರ ನಿಗಾವಹಿಸಬೇಕು. ಹಾಗೂ ವಿದ್ಯಾರ್ಥಿನಿ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ತಾಲೂಕ ಕರ್ನಾಟಕ ರಕ್ಷಣಾ ವೇದಿಕೆ ಉಸ್ತುವಾರಿ ಅಧ್ಯಕ್ಷ ಸಾಂಬಶಿವ ಹೀರೆಮಠ, ದೇವಿಂದ್ರ ನಾಯ್ಕೋಡಿ, ಹಣಮಂತ ಕಾಚಾಪುರ, ರುದ್ರಗೌಡ ಬಿರಾದಾರ್, ಉಮಾಪತಿ ಪುರಾಣಿಕ, ಪ್ರಭುಲಿಂಗಯ್ಯ ಹೀರೆಮಠ, ರಾಜು ನಾಯ್ಕೋಡಿ, ಸಂತೋಷ ಹಡಪದ, ಅರುಣಕುಮಾರ, ಗುರುಲಿಂಗಯ್ಯ, ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ