ಶಿವಮೊಗ್ಗ/ಸೊರಬ: ಆಡಳಿತ ತಾಲೂಕು ಪಂಚಾಯಿತಿ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಪಟ್ಟಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಜಾಥಾ ನಡೆಯಿತು.
ಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಮುಖ್ಯ ರಸ್ತೆ ಮಾರ್ಗವಾಗಿ ಪುರಸಭೆ ಮುಂಭಾಗದ ವೃತ್ತ ನಂತರ ತಾಲೂಕು ಕಚೇರಿ ವರಿಗೆ ಜಾತ ನಡೆಯಿತು. ನಂತರ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಚುನಾವಣಾ ಅಧಿಕಾರಿ ಪ್ರವೀಣ್ ಜೈನ್ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಮಹತ್ವದ್ದಾಗಿದೆ, ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದಲ್ಲಿ ಹಕ್ಕನ್ನು ಚಲಾಯಿಸಬೇಕು ಎಂದು ಕರೆ ನೀಡಿದರು.
ತಾಸಿಲ್ದಾರ ಹುಸೇನ್ ಸರ್ಕಾವಸ್, ಸ್ವೀಟ್ ಸಮಿತಿ ಅಧ್ಯಕ್ಷ ನಾಗರಾಜ್ ಅನ್ವೇಕರ್, ಕೃಷಿ ನಿರ್ದೇಶಕ ಕೆಜಿ ಕುಮಾರ್, ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಇಕ್ಬಾಲ್ ಜಾತಿಗೇರ್, ಸರ್ಕಲ್ ಇನ್ಸ್ಪೆಕ್ಟರ್ ಭಾಗ್ಯವತಿ, ಸಬ್ ಇನ್ಸ್ಪೆಕ್ಟರ್ ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ, ತಾಲೂಕು ಆರೋಗ್ಯ ಅಧಿಕಾರಿ ಡಾಕ್ಟರ್ ಪ್ರಭು ಕೆ ಸಾಹುಕಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಹಾಗೂ ಸಿಆರ್‌ಪಿಎಫ್ ಪಡೆ ಸೇರಿದಂತೆ ಹಲವರು ಪಾಲ್ಗೊಂಡಿದ್ದರು
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.