ಯಾದಗಿರಿ:ಏಪ್ರಿಲ್ 12,:ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ,ಪೋಸ್ಟರ್ ಮತ್ತು ಬ್ಯಾನರನ್ನು ಮುದ್ರಿಸುವ ಮೊದಲು ಅನುಮತಿಯನ್ನು ಕಡ್ಡಾಯವಾಗಿ ಪಡೆದು ಚುನಾವಣೆ ನೀತಿ ಸಂಹಿತೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಸ್ನೇಹಲ್.ಆರ್ ಅವರು ತಿಳಿಸಿದ್ದಾರೆ.
ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿಯ,ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ,ಪೋಸ್ಟರ್ ಮತ್ತು ಬ್ಯಾನರಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.
ಮುದ್ರಕರು ಪಾಂಪ್ಲೇಟಗಳು ಮತ್ತು ಪೋಸ್ಟರಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು ತಾವು ಮುದ್ರಿಸುವ ಎರಡು ಪ್ರತಿಯನ್ನು ನಿಗದಿತ ನಮೂನೆಯಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಜಿಲ್ಲಾಧಿಕಾರಿಗಳಿಗೆ ಹಾಗೂ ಆರ್‌ಓಗಳಿಗೆ ಸಲ್ಲಿಸಬೇಕು ಯಾವುದೇ ಜಾತ್ರೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮುದ್ರಣವಾಗುವ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಹಾಕದಂತೆ ಚುನಾವಣೆ ನೀತಿ ಸಂಹಿತೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಅವರು ಸೂಚಿಸಿದ್ದಾರೆ.
ಪ್ರತಿ ಪೇಜಿನ ಮುದ್ರಣಕ್ಕೆ ಈಗಾಗಲೇ ಹಣ ನಿಗದಿಪಡಿಸಲಾಗಿದೆ ಕರಪತ್ರ,ಫಲಕ ಪೋಸ್ಟರ್ ಬ್ಯಾನರ್ ಮುಂಭಾಗದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು,ಮೊಬೈಲ್ ಸಂಖ್ಯೆ ಮತ್ತು ಮುದ್ರಣ ಪ್ರತಿಗಳ ಸಂಖ್ಯೆ ನಮೂದಿಸಬೇಕು ಎಂದು ಅವರು ತಿಳಿಸಿದ್ದಾರೆ.
ಯಾವುದೇ ಜಾತಿ,ಧರ್ಮದ ಜನರ ಭಾವನೆಗೆ ಧಕ್ಕೆ ತರುವ ವಿಷಯವನ್ನು ಮುದ್ರಿಸಬಾರದು ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ.
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಬ್ಯಾನರ್,ಪ್ಲೆಕ್ಸ್,ಕರಪತ್ರ ಮುದ್ರಣವಾಗದೇ ನಿಯಮವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಚುನಾವಣಾ ಬಹಿಷ್ಕಾರದಂತಹ ಪೋಸ್ಟರ್,ಕರಪತ್ರ ಮತ್ತು ಬ್ಯಾನರ್ ಮುದ್ರಿಸುವುದು ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು: ಸಮೂಹ ಮಾಧ್ಯಮಗಳಾದ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಪ್ರಚೂರಪಡಿಸಬಹುದಾದ ಜಾಹೀರಾತು,ಪೇಡ್ ನ್ಯೂಸ್ ಗಳ ಬಗ್ಗೆ ನಿಗಾ ಇಡಲಾಗಿದೆ ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ಅಭ್ಯರ್ಥಿಗಳು ಜಾಹೀರಾತು ಪ್ರಕಟಿಸುವ ಮುನ್ನ ಪೂರ್ವಾನುಮತಿ ಪಡೆಯಬೇಕು.
ಅನುಮತಿ ಇಲ್ಲದೇ ಜಾಹೀರಾತು ಪ್ರಕಟಿಸಿದಲ್ಲಿ ಕಾನೂನು ರೀತ್ಯ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಎ.ಪಿ.ಎಮ್.ಸಿ ಸಮಿತಿಗಳ ಮೂಲಕ ನಿಗಾ ಸಹ ಇಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.