ಚಿಕ್ಕಮಗಳೂರು:ಕಡೂರು ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ್ದಕ್ಕೆ ಮಾಜಿ ಶಾಸಕ ವೈಎಸ್ಸಿ ದತ್ತಾ ಬೇಜಾರುಗೊಂಡಿದ್ದರು.ನಿನ್ನೆ ಅವರನ್ನು ಜೆಡಿಎಸ್ ನ ಸಂಸದ ಪ್ರಜ್ವಲ್ ರೇವಣ್ಣ ಸೇರಿದಂತೆ ಇತರೆ ನಾಯಕರು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೀಗಾಗಿ ಮಾಜಿ ಶಾಸಕ ವೈಎಸ್ ವಿ ದತ್ತಾ ಜೆಡಿಎಸ್ ಗೆ ವಾಪಸ್ಸು ಆಗುವ ನಿರ್ಧಾರ ಪ್ರಕಟಿಸಿದ್ದಾರೆ. ಅಲ್ಲದೇ ಕಡೂರು ಕ್ಷೇತ್ರದಿಂದ ಅವರಿಗೆ ಟಿಕೆಟ್ ಫಿಕ್ಸ್ ಆಗಿದೆ.ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಮಾಜಿ ಶಾಸಕ ವೈಎಸ್ ವಿ ದತ್ತಾ ಅವರನ್ನು ಹಾಸನದ ಸಂಸದ ಪ್ರಜ್ವಲ್ ರೇವಣ್ಣ,ಮಾಜಿ ಸಚಿವ ಹೆಚ್ ಡಿ ರೇವಣ್ಣ ಭೇಟಿಯಾದರು. ಅವರೊಂದಿಗೆ ಕೆಲ ಕಾಲ ಚರ್ಚಿಸಿ,ಜೆಡಿಎಸ್ ಗೆ ವಾಪಾಸ್ಸು ಬರುವಂತೆ ಮನವೊಲಿಸಿದರು. ಈ ಮನವೊಲಿಕೆ ಪ್ರಯತ್ನ ಯಶಸ್ವಿಯಾಗಿದೆ.
ಈ ಬಗ್ಗೆ ಮಾತನಾಡಿ ಸಂಸದ ಪ್ರಜ್ವಲ್ ರೇವಣ್ಣ,ಕಡೂರು ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ವೈಎಸ್ ವಿ ದತ್ತಾ ಕಣಕ್ಕೆ ಇಳಿಯಲಿದ್ದಾರೆ.ಅವರಿಗೆ ಪಕ್ಷದಿಂದ ಟಿಕೆಟ್ ಸದ್ಯದಲ್ಲೇ ಘೋಷಣೆಯಾಗಲಿದ್ದು, ಇಂದಿನಿಂದಲೇ ಪ್ರಚಾರ ಆರಂಭಿಸಲಿದ್ದಾರೆ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಹೆಚ್ ಡಿ ರೇವಣ್ಣ,ವೈಎಸ್ ವಿ ದತ್ತಾ ಅವರು ಕಡೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ, ಅವರು ನಾಮಪತ್ರ ಸಲ್ಲಿಕೆ ದಿನ ದೇವೇಗೌಡರು ಆಗಮಿಸಲಿದ್ದಾರೆ ಎಂದರು.
ಈ ಬಳಿಕ ಮಾತನಾಡಿದಂತ ಮಾಜಿ ಶಾಸಕ ವೈಎಸ್ ವಿ ದತ್ತಾ,ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮಾತಿಗೆ ನಾನು ಬೆಲೆ ಕೊಡುತ್ತೇನೆ.ಹೆಚ್ ಡಿ ದೇವೇಗೌಡರು ಪಕ್ಷೇತರವಾಗಿ ಸ್ಪರ್ಧಿಸುವುದು ಬೇಡ ಎಂದಿದ್ದಾರೆ ಹಾಗಾಗಿ ದೇವೇಗೌಡರ ಮಾತಿಗೆ ಬೆಲೆಕೊಟ್ಟು ಪಕ್ಷಕ್ಕೆ ವಾಪಾಸ್ಸು ಆಗುತ್ತಿದ್ದೇನೆ. ಏಪ್ರಿಲ್ 18 ರಂದು ಕಡೂರು ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಕಾರ್ಯಕರ್ತರ ಅಭಿಪ್ರಾಯವನ್ನು ಪಡೆದು ಈ ತೀರ್ಮಾನ ಮಾಡಿದ್ದೇನೆ ಎಂಬುದಾಗಿ ತಿಳಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.