ಕಲಬುರಗಿ/ಜೇವರ್ಗಿ: ಮಾದಿಗ ಸಮಾಜ ಪರಿಶಿಷ್ಟ ಪಂಗಡ ಎಡಗೈ ಸಮುದಾಯವು ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಆದರೂ ನಮ್ಮ ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ 2023ನೇ ಸಾಲಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡದೆ ಅನ್ಯಾಯ ಮಾಡಿದೆ ಎಂದು ಯಡ್ರಾಮಿ ತಾಲೂಕಿನ ಮಾದಿಗ ಸಮಾಜದ ಪ್ರಭಾವಿ ಮುಖಂಡರು ಗೊಲ್ಲಾಳಪ್ಪ ಮ್ಯಾಗೇರಿ ಬಿಳವಾರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಮಾದಿಗ ಸಮುದಾಯಕ್ಕೆ ಟಿಕೆಟ್ ನೀಡದೆ ಕಡೆಗಣಿಸಿದೆ ಮತ್ತು ರಾಜ್ಯದಲ್ಲಿಯೂ ಕೂಡಾ ಮಾದಿಗ ಸಮುದಾಯಕ್ಕೆ ಅತಿ ಕಡಿಮೆ ಟಿಕೆಟ್ ನೀಡಿ ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ತುಂಬಾ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಬಲವಾಗಿ ಕಿಡಿ ಕಾರಿದ್ದಾರೆ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು ಅದಕ್ಕಾಗಿ ಸಮಾಜದ ಬಾಂಧವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬಾರದು ನಮ್ಮ ಸಮಾಜವನ್ನು ಕಾಂಗ್ರೆಸ್ ಕಡೆಗಣಿಸಿದೆ ನಾವು ಕೂಡ ಸಂಪೂರ್ಣವಾಗಿ ನಿರ್ಲಕ್ಷಿಸಿ ಕಾಂಗ್ರೆಸ್ ಪಕ್ಷವನ್ನು ಕಡೆಗಣಿಸೋಣ ನಮ್ಮ ಸಮಾಜಕ್ಕೆ ಅಗೌರವ ತೋರಿದ ಕಾಂಗ್ರೆಸ್ ಪಕ್ಷಕ್ಕೆ ನಾವು ಕೂಡಾ ತಕ್ಕ ಪಾಠ ಕಲಿಸಬೇಕಾಗಿದೆ ಅದಕ್ಕಾಗಿ ಸಮಾಜದ ಬಾಂಧವರು ಎಲ್ಲರೂ ಒಂದಾಗಿ ಸಮಾಜಕ್ಕೆ ಆಗಿರುವ ಅನ್ಯಾಯದ ವಿರುದ್ಧ ನಾವೆಲ್ಲರೂ ಪಣತೊಡೋಣ ಎಂದು ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಮಾದಿಗ ಸಮಾಜದ ಪ್ರಭಾವಿ ಮುಖಂಡರು ಗೊಲ್ಲಾಳಪ್ಪ ಮ್ಯಾಗೇರಿ ಅವರು ಸಮಾಜದ ಬಾಂಧವರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.