ಕಲಬುರಗಿ/ಜೇವರ್ಗಿ-ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭೋವಿ ಸಮಾಜದ ಗೂಳಿಹಟ್ಟಿ ಶೇಖರ್ ಹೊಸದುರ್ಗ ಮತಕ್ಷೇತ್ರ ಶಾಸಕರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ಇವರಿಗೆ ಮೋಸ ಮಾಡಿದ ಬಿಜೆಪಿ ಸರ್ಕಾರವು ಇವರಿಗೆ ಟಿಕೆಟ್ ನೀಡದೆ ಕಡೆಗಣಿಸಿದೆ ಅಷ್ಟೇ ಅಲ್ಲದೆ ಪ್ರಭಾವಿ ಮುಖಂಡರು ಅರವಿಂದ್ ಲಿಂಬಾವಳಿ ಮಹದೇವಪುರದ ಮತಕ್ಷೇತ್ರದ ಶಾಸಕರು ಇವರಿಗೂ ಕೂಡ ಟಿಕೆಟ್ ನೀಡಿದೆ ಕಡೆಗಣಿಸಿದೆ ಇದೇ ರೀತಿಯಾಗಿ ಪುಲಿಕೇಶಿ ನಗರದ ಶಾಸಕರಾದ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ನೀಡದೇ ಕಡೆಗಣಿಸಲಾಗಿದೆ ಕರ್ನಾಟಕ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸಿ ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗಿ ಬಂದ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೆ ಮೋಸ ಮಾಡಲಾಗಿದ್ದು ಈ ಮೇಲಿನ ಷಡ್ಯಂತ್ರಗಳನ್ನು ನೋಡಿದಾಗ ಹಿಂದುಳಿದ ಸಮುದಾಯದ ಮುಖಂಡರು ಬೆಳೆಯುವುದಕ್ಕೆ ಕಡಿವಾಣ ಹಾಕಿರುವುದು ನೋಡಿದರೆ ಕಾಣದ ಕೈಗಳ ಕೈವಾಡ ಮೇಲ್ನೋಟಕ್ಕೆ ಕಂಡುಬರುತ್ತದೆ ಆದ್ದರಿಂದ ಭೋವಿ ಸಮಾಜದ ಎಲ್ಲಾ ಮತಬಾಂಧವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ ನಮ್ಮ ಸಮುದಾಯವನ್ನು ಕಡೆಗಣಿಸಿದ ಬಿಜೆಪಿ ಸರ್ಕಾರಕ್ಕೆ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಮತದಾನದ ಮುಖಾಂತರ ಬಿಸಿ ಮುಟ್ಟಿಸಬೇಕಾಗಿದೆ ಎಂದು ಆರ್ ಟಿ ಈ ಹೊರಟಗಾರ ಪರಶುರಾಮ್ ದಂಡಗುಲ್ಕರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹಾಗೂ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರಕ್ಕೆ ಬೋವಿ ಸಮುದಾಯದವರು ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.