ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಪಕ್ಷದ ಅಭ್ಯರ್ಥಿ ಮಂಗೋಟೆ ಬೃಹತ್ ರೋಡ್ ಶೋ

ಭದ್ರಾವತಿ:ಈ ಬಾರಿ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ಬಿಜೆಪಿ ಪಕ್ಷದ ಅಭ್ಯರ್ಥಿ ಮೊದಲ ಬಾರಿಗೆ ಸ್ಪರ್ಧೆಸಿರುವ ಮಂಗೋಟೆ ರುದ್ರೇಶ್ ಬೃಹತ್ ರೋಡ್ ಶೋ ನಡೆಸುವ ಮೂಲಕ ಗಮನ ಸೆಳೆದರು.
ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್‌ನಿಂದ ಬೆಳಿಗ್ಗೆ 11 ಗಂಟೆ ಸುಮಾರಿಗೆ ಆರಂಭಗೊಂಡ ರೋಡ್ ಶೋ ನಲ್ಲಿ ಬಿಜೆಪಿ ಕೇಸರಿ ಪೇಟ ಧರಿಸಿ ಬಜರಂಗದಳ ಕಾರ್ಯಕರ್ತರಂತೆ ಕಂಗೊಳಿಸುವ ಮೂಲಕ ಶ್ರೀ ಆಂಜನೇಯ ಸ್ವಾಮಿಯ ಪ್ರತಿಮೆಯೊಂದಿಗೆ ಬೈಕ್ ರ‍್ಯಾಲಿ ನಡೆಸಿದರು.
ಕಾರ್ಯಕರ್ತರು, ಅಭಿಮಾನಿಗಳು ಸೇಬು, ಮೂಸುಂಬೆಯಿಂದ ತಯಾರಿಸಿದ ಬೃಹತ್ ಹಾರ ಕ್ರೇನ್ ಮೂಲಕ ಅರ್ಪಿಸಿದರು. ಡೊಳ್ಳು ಕುಣಿತದೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಜ್ಜೆ ಹಾಕಿದರು.
ಚಲನಚಿತ್ರ ನಟಿ ತಾರ, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಹಾಗೂ ಪಕ್ಷದ ವಿವಿಧ ಮೋರ್ಚಾಗಳ, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಹಾಗೂ ಕ್ಷೇತ್ರದ ಮುಖಂಡರು ಪಾಲ್ಗೊಂಡಿದ್ದರು. ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತದವರೆಗೂ ರೋಡ್ ಶೋ ನಡೆಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ