ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚುನಾವಣಾ ಜಾಹಿರಾತು ಪ್ರಸಾರ ಕುರಿತಂತೆ ಮಾಧ್ಯಮಗಳಿಗೆ ಮಾರ್ಗಸೂಚಿ

ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126 ರ ಪ್ರಕಾರ ನಿಷೇದಿಸಲಾಗಿದೆ.

ಚುನಾವಣಾ ಸಂಬಂಧೀ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ವಿಷಯಗಳಾಗಿರುತ್ತವೆ.

ಈ ಕಾಯ್ದೆಯನ್ನು ಉಲ್ಲಂಘಿಸುವವರಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ.

ಟಿವಿ/ರೇಡಿಯೋ/ಕೇಬಲ್ ನೆಟ್.ವರ್ಕ್ ಮತ್ತು ಎಲ್ಲ ಡಿಜಿಟಲ್ ಮಾಧ್ಯಮಗಳು ಮತದಾನಪೂರ್ವ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳು ಪ್ರಸಾರ ಮಾಡದಂತೆ ಕ್ರಮವಹಿಸಬೇಕು.

ಕಾರ್ಯಕ್ರಮದಲ್ಲಿ ಭಾಗವಹಿಸುವವರು(ಪ್ಯಾನಲಿಸ್ಟ್) ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು.

ನಿಗದಿತ 48 ಗಂಟೆಗಳ ಅವಧಿಯಲ್ಲಿ ಓಪಿನಿಯನ್ ಪೋಲ್ ಫಲಿತಾಂಶ ಪ್ರಕಟಿಸುವುದು ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು. ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವುದು ಕೂಡ ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 126 ರ ವ್ಯಾಪ್ತಿಯಲ್ಲಿ ಬರುತ್ತದೆ.

ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಅಂಗವಾಗಿ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದ್ದರಿಂದ ಎಲ್ಲ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮಗಳು ಮೇ 8 ರ ಸಂಜೆ 6 ಗಂಟೆಯಿಂದ ಮೇ 10 ರ ಸಂಜೆ 6.30 ಗಂಟೆಯವರೆಗೆ ಮೇಲ್ಕಂಡ ನಿರ್ದೇಶನಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ