ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಯಗೌಡ ಪಾಟೀಲ್

ಇಂಡಿ: ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖಂಡ ರಮೇಶ್ ಕಲ್ಯಾಣ ಮಾತನಾಡಿ ಇಂಡಿ ಕ್ಷೇತ್ರವನ್ನು ಕಳೆದ ಹತ್ತು ವರ್ಷದಲ್ಲಿ ಶಾಸಕರು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಸ್ವಾತಂತ್ರ‍್ಯ ನಂತರ ಇದುವರೆಗೂ ಇಂಡಿ ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆತಿಲ್ಲ. ಹೀಗಾಗಿ ಸಚಿವ ಸ್ಥಾನ ವಂಚಿತ ಇಂಡಿ ಮತಕ್ಷೇತ್ರಕ್ಕೆ ಈ ಬಾರಿ ಕಡ್ಡಾಯವಾಗಿ ಸಚಿವ ಸ್ಥಾನ ನೀಡಬೇಕು ಎಂದು ಹೈಕಮಾಂಡ್ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ವಿನಂತಿ ಪೂರ್ವಕವಾಗಿ ಆಗ್ರಹಿಸುತ್ತೇವೆ ಎಂದರು.
ಹಲವು ದಶಕಗಳಿಂದ ಇಂಡಿ ಕ್ಷೇತ್ರಕ್ಕೆ ಸಚಿವ ಸ್ಥಾನವೇ ಸಿಕ್ಕಿಲ್ಲ. ಸಚಿವ ಸ್ಥಾನವಂಚಿತ ಎಂಬ ಹಣೆಪಟ್ಟಿ ಹೊಂದಿದ ತಾಲೂಕಿಗೆ ಸಚಿವ ಸ್ಥಾನ ನೀಡಿ ಹಣೆಪಟ್ಟಿ ಅಳಿಸಬೇಕು. ಇಂಡಿ ಕ್ಷೇತ್ರದ ಸರ್ವಾಂಗೀಣ ಅಭಿವೃಧ್ಧಿಗಾಗಿ ಯಶವಂತ್ರಾಯಗೌಡರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
ಯಶವಂತ್ರಾಯಗೌಡ ಪಾಟೀಲರು ಸಾಕಷ್ಟು ರಾಜಕೀಯ ಜ್ಞಾನ ಹೊಂದಿದ್ದು ಅವರಿಗೆ ಯಾವುದೇ ಖಾತೆ ನೀಡಿದರೂ ಸಮರ್ಪಕವಾಗಿ ನಿಭಾಯಿಸುತ್ತಾರೆ ಅವರಿಗೆ ಉತ್ತಮ ಖಾತೆ ನೀಡಿ ಸಚಿವರನ್ನಾಗಿ ಮಾಡಬೇಕೆಂದರು.
ಅರ್ಜುನ ಚಾಂದಕವಟೆ, ಶಿವಾನಂದ ಹೊಸೂರ, ಪ್ರಭು ಹ್ಯಾಳದ, ಶಾಂತಯ್ಯ ಹಿರೇಪಟ್ಟ, ಅಪ್ಪಾಶ್ಯಾ ಪಡಶೆಟ್ಟಿ, ಬಸವರಾಜ ಕರೂರ, ವಿಠ್ಠಲ ಕಡಬಗಾಂವ, ನಾಗರಾಜ ಹಸನಾಪೂರ, ಶಿವಾನಂದ ಬಗಲಿ, ಗಂಗಾಧರ ಗುಳೇದ, ಹಣಮಂತ ಉಪ್ಪಾರ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ.ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ