ಬೆಂಗಳೂರು:ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ-ಮುಖ್ಯ ಮಂತ್ರಿಯಾಗಿ ಡಿ.ಕೆ.ಶಿವುಕುಮಾರ ಅವರಿಗೆ ಅಧಿಕೃತವಾಗಿ ಅಧಿಕಾರ ಹಸ್ತಾಂತರ ಮಾಡಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು ವಿಶೇಷವಾಗಿ ಡಿ.ಕೆ.ಶಿವುಕುಮಾರ ಒಬ್ಬರು ಮಾತ್ರ ಡಿ.ಸಿ.ಎಂ ಆಗಿರುತ್ತಾರೆ ಎಂದು ಹೇಳಿದರು. ಕೆ.ಸಿ.ವೇಣುಗೋಪಾಲ್.ಕೆಪಿಸಿಸಿ ರಾಜ್ಯ ಅಧ್ಯಕ್ಷರಾಗಿಯೂ ಡಿ.ಕೆ.ಶಿವುಕುಮಾರ ಅವರೇ ಮುಂದುವರಿಯಲಿದ್ದಾರೆ ಎಂದು ಹೇಳಿದರು.
ಮೇ 20 ರಂದು ಮಧ್ಯಾಹ್ನ 12:30 ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಅಂದು ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ-ಮುಖ್ಯ ಮಂತ್ರಿಯಾಗಿ ಡಿ.ಕೆ.ಶಿವುಕುಮಾರ ಅವರಿಗೆ ಅಧಿಕಾರ ವಹಿಸುತ್ತಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯರು ಘೋಷಣೆ ಮಾಡಿದರು.
ಕರ್ನಾಟಕದ ಗೆಲುವಿಗೆ ಕಾರಣರಾದ ಸೋನಿಯಾ ಗಾಂಧಿ,ಪ್ರಿಯಾಂಕ್ ಗಾಂಧಿ, ರಾಹುಲ್ ಗಾಂಧಿ, ಸೇರಿದಂತೆ ಎಲ್ಲಾ ಹಿರಿಯ ನಾಯಕರಿಗೆ ಗೌರವ ಸಲ್ಲುತ್ತದೆ ಎಂದರು.
ಭಾರತ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ.ರಾಜ್ಯದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ ಎಂದು ಕೆ.ಸಿ.ವೇಣಗೋಪಾಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ಪಕ್ಷವನ್ನು ಸಂಘಟಿಸಿದ್ದಾರೆ.ಸಿದ್ದರಾಮಯ್ಯ ಡಿ.ಕೆ.ಶಿವುಕುಮಾರ ಇಬ್ಬರೂ ಸಮರ್ಥ ನಾಯಕರು ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಿ ರಾಜ್ಯದಲ್ಲಿ ಸಮೃದ್ಧವಾಗಿ ಆಡಳಿತ ನಡೆಸಿದ್ದಾರೆ ಹೀಗಾಗಿ ರಾಜ್ಯದಲ್ಲಿ ಸುಭದ್ರ ಸರ್ಕಾರವನ್ನು ಕಾಂಗ್ರೆಸ್ ನೀಡಲಿದೆ ಎಂದು ಹೇಳಿದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ