ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ್‌ ಗೆ ಮಂತ್ರಿಸ್ಥಾನ ನೀಡಲೇಬೇಕು:ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಗ್ರಹ

ಭದ್ರಾವತಿ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ 4ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿ.ಕೆ ಸಂಗಮೇಶ್ವರ್‌ ರವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ತಾಲ್ಲೂಕಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ನೇತೃತ್ವದಲ್ಲಿ ವೀರಶೈವ ಸಮಾಜದ ವಿವಿಧ ಸಂಘಟನೆಗಳು ಅಗ್ರಹಿಸಿವೆ.
ಬಿ ಕೆ ಸಂಗಮೇಶ್ವರ್‌ರವರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದಾರೆ. ವಿಶೇಷವಾಗಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಹೆಚ್ಚಿನ ಅಧ್ಯತೆ ನೀಡಿದ್ದಾರೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಕೈಗೊಳ್ಳಲು ಸಂಗಮೇಶ್ವರ್ ಸಮರ್ಥರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕೆಂದು ಬೇಕೆಂದು ಒತ್ತಾಯಿಸಿದರು.
ಸಮಾಜದ ವಿವಿಧ ಪಂಗಡಗಳ ಪ್ರಮುಖರಾದ ಅಡವೀಶಯ್ಯ, ಜಿ. ಸುರೇಶಯ್ಯ, ಸಿದ್ದಲಿಂಗಯ್ಯ, ಬಸವರಾಜಯ್ಯ, ಸತೀಶ್, ಆರ್. ಮಹೇಶ್‌ಕುಮಾರ್, ಬಸವಂತಪ್ಪ, ಡಾ. ಜಿ.ಎಂ ನಟರಾಜ್, ವಾಗೀಶ್, ಪೂರ್ಣಿಮಾ, ಸುವರ್ಣಮ್ಮ, ಮಹಾದೇವ್, ಜಗದೀಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ : ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ