ಮೈಸೂರು:ಚಾಮುಂಡಿ ಬೆಟ್ಟದಲ್ಲಿ ಶ್ರೀ ಮದಕರಿ ನಾಯಕರ ಪುತ್ಥಳಿ ನಿರ್ಮಾಣ ಮಾಡುವಂತೆ ಕನ್ನಡಪರ ಹೋರಾಟಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.
ವಿಶ್ವ ಪ್ರಸಿದ್ಧ ಚಾಮುಂಡಿ ಬೆಟ್ಟದಲ್ಲಿ ಶ್ರೀ ಮದಕರಿ ನಾಯಕರ ಪುತ್ಥಳಿ ನಿರ್ಮಾಣ ಮಾಡಲೇಬೇಕೆಂದು ಆಗ್ರಹಿಸಿದ್ದಾರೆ.
ಚಾಮುಂಡಿ ಬೆಟ್ಟದ ನಿವಾಸಿ ಹಾಗೂ ಪತ್ರಕರ್ತರಾದ ಸತ್ಯನಾರಾಯಣರವರು ವರ್ಷದ ಹಿಂದೆಯೇ ಚಾಮುಂಡಿ ಬೆಟ್ಟದಲ್ಲಿ ಶ್ರೀ ಮದಕರಿ ನಾಯಕರ ಪುತ್ಥಳಿ ನಿರ್ಮಾಣ ಮಾಡುವಂತೆ ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು.
ಈ ಕುರಿತು ಹಿಂಬರಹ ಕಳುಹಿಸಿರುವ ಗ್ರಾಮ ಪಂಚಾಯಿತಿ ಪಿಡಿಒ,ಈ ವಿಷಯಕ್ಕೆ ಸಂಬಂಧಪಟ್ಟಂತೆ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಚಾಮುಂಡಿ ಬೆಟ್ಟದ ನಾಯಕರ ಸಮುದಾಯ ಭವನದ ಕಛೇರಿಯ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪುತ್ಥಳಿ ನಿರ್ಮಾಣ ಮಾಡುವಂತೆ ತಿಳಿಸಿದ್ದಾರೆ.
ಈ ಬಗ್ಗೆ 29.6.2022 ರಂದು ಸಭೆಯಲ್ಲಿ ಸರ್ವಾನುಮತದಿಂದ ತಿರ್ಮಾನಿಸಿ ಒಂದು ವರ್ಷವೇ ಕಳೆದಿದ್ದರೂ ಸಹ ಶ್ರೀ ಮದಕರಿ ನಾಯಕರ ಪುತ್ಥಳಿ ನಿರ್ಮಾಣ ಕಾರ್ಯ ಆರಂಭವಾಗದೆ ಇರುವುದು ಬೇಸರದ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯಿತಿಯ ಸಂಭಂದ ಪಟ್ಟ ಅಧಿಕಾರಿಗಳು ಪುತ್ಥಳಿ ನಿರ್ಮಾಣ ಕಾರ್ಯ ಆರಂಭ ಮಾಡಬೇಕು ಇಲ್ಲವಾದಲ್ಲಿ ಹೋರಾಟ ಮಾಡ ಬೇಕಾಗುತ್ತದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಎಚ್ಚರಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.