ಭದ್ರಾವತಿ:ಪರಿಸರ ಉಳಿವಿಗಾಗಿ ಜಾಗೃತಿ ಮೂಡಿಸಲು ಆಂಧ್ರ ಪ್ರದೇಶದ ನೆಲ್ಲೂರಿನ ಯುವಕ ಗುರ್ರಂ ಚೈತನ್ಯರವರು ಸುಮಾರು 50 ಸಾವಿರ ಕಿ.ಮೀ.ಸೈಕಲ್ ಜಾಥಾ ಮೂಲಕ ಅಭಿಯಾನ ಕೈಗೊಂಡಿದ್ದಾರೆ.
ಆಂದ್ರಪ್ರದೇಶದ ನೆಲ್ಲೂರಿನಿಂದ ಆರಂಭಗೊಂಡಿರುವ ಸೈಕಲ್ ಜಾಥಾ ಅಭಿಯಾನ 150 ದಿನಗಳನ್ನು ಪೂರೈಸಿದ್ದು, ಇದುವರೆಗೂ ಸುಮಾರು 10 ಸಾವಿರ ಕಿ.ಮೀ ಕ್ರಮಿಸಿದ್ದಾರೆ. ಭಾನುವಾರ ನಗರಕ್ಕೆ ಆಗಮಿಸಿದ ಚೈತನ್ಯರನ್ನು ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಶ್ರೀ ವಾಸವಾಂಬ ದೇವಾಲಯದಲ್ಲಿ ಸ್ವಾಗತಿಸಿ ಅಭಿನಂದಿಸಲಾಯಿತು.
ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬದರಿನಾರಾಯಣ ಶ್ರೇಷ್ಠಿ, ಶ್ರೀ ಕನ್ಯಕಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸಿ.ಎನ್ ಗಿರೀಶ್, ವಾಸವಿ ಮಹಿಳಾ ಮಂಡಳಿ ಅಧ್ಯಕ್ಷೆ ಸತ್ಯಲಕ್ಷ್ಮಿ, ಉಪಾಧ್ಯಕ್ಷೆ ಲತಾ ಬದರೀಶ್, ವಾಸವಿ ಯುವಜನ ಸಂಘದ ಸುಬ್ಬರಾಜ್, ವಾಸವಿ ವನಿತಾ ಸಂಘದ ಅಧ್ಯಕ್ಷೆ ಶ್ರೀಲಕ್ಷ್ಮಿ, ಕಾ.ರಾ ನಾಗರಾಜ್, ವಿಶಾಲಾಕ್ಷಿ, ನಾಗೇಶ್, ಗೋವಿಂದ, ಎಂ.ಎಲ್ ಶ್ರೀಧರಮೂರ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
