ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪೇಟೆ ಸರ್ಕಾರಿ ಶಾಲೆ ಪ್ರಾರಂಭದ ಮೊದಲ ದಿನ ಶಾಲಾ ಅಭಿವೃದ್ಧಿ ಸಮಿತಿ ಮತ್ತು ಶಾಲಾ ಶಿಕ್ಷಕಿಯರು ಮಕ್ಕಳಿಗೆ ಹೂವು ನೀಡುವುದರ ಮೂಲಕ ಸ್ವಾಗತಿಸಿ ನಂತರ
ಮಕ್ಕಳಿಗೆ ಪುಸ್ತಕ ವಿತರಣೆ ಮಾಡಿ
ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸಲು ಸಾರ್ವಜನಿಕರು ಹಾಗೂ ಹಳೆ ವಿದ್ಯಾರ್ಥಿ ಗಳು ಮತ್ತು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಬದಲು
ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಕೈ ಜೋಡಿಸಿ ಎಂದು ಹೇಳಿದರು
ಈ ಸಮಯದಲ್ಲಿ ನಮ್ಮ ವಾಹಿನಿಯ ಜೊತೆ ಮಾತನಾಡಿದ ಹಳೆ ವಿದ್ಯಾರ್ಥಿ ಗಳು ವಸಂತ ಮತ್ತು ಪವಾರ್
ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಶಾಸಕರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಖಡ್ಡಾಯವಾಗಿ ಓದಬೇಕು ಎಂಬ ಕಾನೂನು ಜಾರಿಗೆ ತರಲು ಆಗ್ರಹ ಮಾಡಿದರು
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ
ಪ್ರತಿಭಾವಂತ ಸರ್ಕಾರಿ ಶಿಕ್ಷಕ ತನ್ನ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ ಈ ಪದ್ಧತಿ ಮೊದಲು ಹೋಗಬೇಕು ಎಂದು ಹೇಳಿದರು.
ವರದಿ-ಪ್ರಭಾಕರ ಹೊನ್ನಾಳಿ