ಯಾದಗಿರಿ:ಶಹಾಪುರ ತಾಲೂಕಿನ ಕನ್ನಕೋಳೂರು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವತಿಯಿಂದ 10 ನೇ ತರಗತಿಯಲ್ಲಿ 80% ಅಂಕ ಪಡೆದ ವಿದ್ಯಾರ್ಥಿಗಳಿಗೆ ನೋಟ್ ಬುಕ್,ಶುಲ್ಕ ಭಾಗ್ಯ,ವಾಟರ್ ಫಿಲ್ಟರ್ ವಿತರಣೆ ಆಯೋಜಿಸಿದ್ದರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಬಸವರಾಜ ಸಜ್ಜನ್ ಸಹಾಯಕ ನಿರ್ದೇಶಕರು ತಾಲೂಕ ಪಂಚಾಯತಿ ಶಹಾಪುರ ಹಾಗೂ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀಬಾ ಜಲಿಯನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಸವರಾಜ ಸಜ್ಜನ್ ಅವರು ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಬೇಕಾದರೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಮತ್ತು ಶಾಲೆಗೆ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡುತ್ತೇವೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ 10 ನೇ ತರಗತಿಯ ಶಾಲಾ ವಿದ್ಯಾರ್ಥಿಗಳು 2023 ರಲ್ಲಿ 80% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು ಎಲ್ಲಾ ಪ್ರತಿಭಾನ್ವಿತ ಮಕ್ಕಳಿಗೆ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವತಿಯಿಂದ ಸ್ಕೂಲ್ ಬ್ಯಾಗ್, ನೋಟಬುಕ್ ವಿತರಣೆ ಮಾಡಲಾಯಿತು. ಹಾಗೂ ಗ್ರಾಮದ ಮಹಿಳೆಯರಿಗೆ ಸ್ವ ಉದ್ಯೋಗ ಕಲ್ಪಿಸಿಕೊಳ್ಳಲು ನಮ್ಮ ಸಂಸ್ಥೆಯಿಂದ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು ಗ್ರಾಮದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್ ಮತ್ತು ವಾಟರ್ ಫಿಲ್ಟರ್ ಗಳನ್ನು ನೀಡಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀಬಾ ಜಲಿಯನ್ ಅವರು ಗ್ರಾಮೀಣ ಭಾಗದ ಮಕ್ಕಳು ಪ್ರತಿ ದಿನ ತಪ್ಪದೇ ಶಾಲೆಗೆ ಹಾಜರಾಗಬೇಕು ಎಂದು ಹೇಳಿದರು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯವರು ವಿವಿಧ ಅಭಿವೃದ್ಧಿ ಕಾಮಗಾರಿಗಳು ಮಾಡುತ್ತಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಅನಿಲ್ ತೇಜಪ್ಪ ಬಲ್ಲೂರಕರ್ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಯಾದಗಿರಿ ಕ್ಷೇತ್ರಾಭಿವೃದ್ಧಿ ರವರು 3 ವರ್ಷಗಳಿಂದ ನಡೆದ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣವಾಗಿ ಮಾಹಿತಿ ನೀಡಿದರು. ವಿಶೇಷವಾಗಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಒತ್ತು ನೀಡಿ ಸೇವೆ ಸಲ್ಲಿಸುತ್ತಿದ್ದೇವೆ ಎಂದು ಹೇಳಿದರು.
ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಸವರಾಜ ಸಜ್ಜನ್ ಸಹಾಯಕ ನಿರ್ದೇಶಕರು ತಾಲೂಕ ಪಂಚಾಯತಿ ಶಹಾಪುರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀಬಾ ಜಲಿಯನ್, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಸಂಯೋಜನಾಧಿಕಾರಿಗಳಾದ ಅನಿಲ ತೇಜಪ್ಪ ಬಲ್ಲೂರಕರ್,ಶ್ರೀಮತಿ ಸುರೇಖಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು,ರಿಯಾಜ್ ಪಟೇಲ್ ಹಾಗೂ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಾಲಾ ಶಿಕ್ಷಕರ ವೃಂದ ಗ್ರಾಮ ಪಂಚಾಯಿತಿ ಸದಸ್ಯರುಗಳು ಮತ್ತು ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಮದ ಹಿರಿಯರ ಮುಖಂಡರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ