ರಾಯಚೂರು ಜಿಲ್ಲೆ ಲಿಂಗಸೂಗೂರ ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು ಈ ಮಳೆಯಲ್ಲಿ ಆಕಸ್ಮಿಕ ಸಿಡಿಲಾಘಾತದಿಂದ ಗಾಯಗೊಂಡ ನೀರಲಕೇರಿಯ ಮೂರು ಜನರು ಚಿಕಿತ್ಸೆಗಾಗಿ ಲಿಂಗಸುಗೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಆಗಿ ಚಿಕಿತ್ಸೆ ಪಡೆಯುತ್ತಿದ್ದು,ಈ ಸುದ್ದಿ ತಿಳಿದ ಲಿಂಗಸುಗೂರ ಶಾಸಕರಾದ ಶ್ರೀ ಮಾನಪ್ಪ ಡಿ.ವಜ್ಜಲ ಅವರ ಪುತ್ರ ಶ್ರೀ ಈಶ್ವರ್ ಎಂ.ವಜ್ಜಲರು ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿ ಕೈಲಾದ ಸಹಾಯ ಮಾಡಿ ಧೈರ್ಯ ತುಂಬುವ ಕೆಲಸ ಮಾಡಿದರು ಮತ್ತು ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳೊಂದಿಗೆ ಚರ್ಚಿಸಿ,ಗಾಯಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ವೀರನಗೌಡ ಪಾಟೀಲ್ ಲೆಕ್ಕಿಹಾಳ್ ಹಾಗೂ ಪಕ್ಷದ ಹಿರಿಯ ಮುಖಂಡರಾದ ಕೆ ನಾಗಭೂಷಣ್,ದ್ಯಾಮಣ್ಣ ನಾಯಕ್, ಜಗದೀಶ್ ಹಿರೇಮಠ,ಸೇರಿದಂತೆ ಆಸ್ಪತ್ರೆಯ ವೈದ್ಯರು ಉಪಸ್ಥಿತರಿದ್ದರು.
ವರದಿ:ಪುನೀತಕುಮಾರ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.