ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ರಾಂಪುರ ಸಮುದಾಯ ಆರೋಗ್ಯ ಕೇಂದ್ರದ ಎಲ್ಲಾ ಕಾರ್ಯನಿರತ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಯಾವುದೇ ಜವಾಬ್ದಾರಿಗಳಿಲ್ಲದೆ ತಮ್ಮ ಇಷ್ಟಕ್ಕೆ ತಾವೇ ಸಮಯದ ಪರಿಕಲ್ಪನೆ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ.ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸದ ವೈದ್ಯರನ್ನು ಕಾದು ಕಾದು ಸುಸ್ತಾದವರು ಇದಕ್ಕೆ ಸಂಬಂಧಪಟ್ಟ ಮೇಲಧಿಕಾರಿಗಳ ನಿರ್ಲಕ್ಷವೇ ಕಾರಣ ಎನ್ನುತ್ತಿದ್ದಾರೆ ಸಿಬ್ಬಂದಿ ವರ್ಗದವರು ಯಾವುದೇ ಭಯವಿಲ್ಲದೆ ವರ್ತಿಸುತ್ತಿದ್ದಾರೆ ಇದಕ್ಕೆ ಸಂಬಂಧಪಟ್ಟ ಟಿಎಚ್ಒ,ಡಿಎಚ್ಒ ಭೇಟಿ ನೀಡಿ ಪರಿಶೀಲನೆ ನಡೆಸುವ ಕಡೆ ಗಮನ ಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ:ಸಿದ್ದೇಶ ಜಿ
