ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಡಾ.ಭೇರ್ಯ ರಾಮಕುಮಾರ್

ಕಲಬುರಗಿ:ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಹೊಣೆಯಲ್ಲ ಪ್ರತಿಯೊಬ್ಬ ವ್ಯಕ್ತಿಯೂ ಪರಿಸರ ಸಂರಕ್ಷಿಸಲು ಶ್ರಮವಹಿಸಬೇಕು ಎಂದು ಹಿರಿಯ ಸಾಹಿತಿಗಳಾದ ಡಾ.ಭೇರ್ಯ ರಾಮಕುಮಾರ್ ನುಡಿದರು.
ಕೆ.ಆರ್.ನಗರ ಟೌನ್ ಆಂಜನೇಯ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಭಗತ್ಸಿಂಗ್ ಯೂತ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಏರ್ಪಡಿಸಲಾಗಿದ್ದ ಪರಿಸರ ದಿನಾಚರಣೆ ಹಾಗೂ ಸಂಸ್ಥೆಯ ಪದಾಧಿಕಾರಿ ರವಿ ಅವರ ಜನ್ಮದಿನದ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಪರಿಸರ ಎಂಬುದು ಗಾಳಿ ತಯಾರು ಮಾಡುವ ಒಂದು ಕಾರ್ಖಾನೆ ಈ ಕಾರ್ಖಾನೆ ನಾಶವಾದರೆ ಮಾನವ ಜೀವಿಗಳ ಅಂತ್ಯವಾಗುತ್ತದೆ.ಕಲುಷಿತ ಪರಿಸರದಿಂದ ಹೃದಯಾಘಾತ,ಶ್ವಾಸನಾಳದ ಕ್ಯಾನ್ಸರ್ ಮೊದಲಾದ ರೋಗಗಳು ಉಂಟಾಗುತ್ತವೆ. ಆದ್ದರಿಂದ ಪರಿಸರ ಸಂರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ ಎಂದು ಕಿವಿಮಾತು ನುಡಿದರು.ಪ್ರತಿಯೊಬ್ಬರೂ ತಮ್ಮ ಜನ್ಮದಿನದಂದು ತಮ್ಮ ತಂದೆ-ತಾಯಿಗಳ ಜನ್ಮದಿನದಂದು,ವಿವಾಹ ವಾರ್ಷಿಕೋತ್ಸವದಂದು, ತಮ್ಮ ಹಿರಿಯರ ಸ್ಮರಣೆಯಲ್ಲಿ ಪ್ರತಿ ವರ್ಷವೂ ಒಂದೊಂದು ಸಸಿಯನ್ನು ನೆಡಬೇಕು.ಆ ಮೂಲಕ ಉತ್ತಮ ಪರಿಸರವನ್ನು ಮುಂದಿನ ಪೀಳಿಗೆಗೆ ನೀಡಬೇಕು ಎಂದು ಭೇರ್ಯ ರಾಮಕುಮಾರ್ ಕರೆ ನೀಡಿದರು.
ತಮ್ಮ ಜನ್ಮದಿನದ ಅಂಗವಾಗಿ ಶಾಲೆಗೆ ಸಸಿಗಳನ್ನು ದಾನವಾಗಿ ನೀಡಿದ ರವಿ ಅವರ ಕಾರ್ಯ ಶ್ಲಾಘನೀಯ ಎಂದವರು ನುಡಿದರು.
ಭಗತ್ ಸಿಂಗ್ ಯೂತ್ ಫೌಂಡೇಶನ್ ಕಾರ್ಯದರ್ಶಿ ರಕ್ಷಿತ್, ರವಿ,ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಲತಾ,ಶಿಕ್ಷಕರಾದ ಉದಯಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ