ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ದಂಡಾಧಿಕಾರಿಗಳ ಕಾರ್ಯಲಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರು ಸಾರ್ವಜನಿಕರಿಂದ ಹಗಲು ದರೋಡೆ ಮಾಡುತ್ತಿದ್ದಾರೆ ಬಡ ಜನರ ಸಣ್ಣ ಕೆಲಸಗಳಿಗಾಗಿ ಬಂದ ರೈತರ ಬಳಿ ಹಣ ತೆಗೆದುಕೊಂಡು ಕೆಲಸ ಮಾಡಿ ಕೊಡುತ್ತಿದ್ದಾರೆ ರೈತರು ದುಡ್ಡು ಎಲ್ಲಿಂದ ತರಬೇಕು ಲಂಚ ಕೊಟ್ಟು ಕೆಲಸ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಅದೇ ರೀತಿಯಾಗಿ ಒಬ್ಬ ಅಧಿಕಾರಿ ಒಂದೇ ಸ್ಥಳದಲ್ಲಿ ಹತ್ತು ವರ್ಷ ಕೆಲಸ ಮಾಡುವಂತಿಲ್ಲ ಸರ್ಕಾರ ಇಂತಹ ಅಧಿಕಾರಿಗಳನ್ನು ಈ ಸ್ಥಳದಿಂದ ವರ್ಗಾವಣೆ ಮಾಡಬೇಕು ಇಲ್ಲದಿದ್ರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಳು ಕಾರಗೊಂಡ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಡ್ರಾಮಿ ತಾಲೂಕ ಅಧ್ಯಕ್ಷರು ಆಗ್ರಪಡಿಸಿದ್ದಾರೆ ಒಂದು ವೇಳೆ ಸೂಕ್ತ ಕ್ರಮ ಕೈಗೊಳ್ಳದೆ ಹೋದರೆ ತಾಲೂಕಿನಲ್ಲಿ ಎಲ್ಲ ಒಕ್ಕೂಟ ಸಂಘಗಳೊಂದಿಗೆ ಸೇರಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.