ಕಲಬುರಗಿ/ಜೇವರ್ಗಿ:ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜುಗಳಲ್ಲಿ ಕರಾಟೆ ಶಿಕ್ಷಕರ ವಿದ್ಯಾರ್ಹತೆಯ ಆಧಾರದ ಮೇಲೆ ಕರಾಟೆ ಶಿಕ್ಷಕರನ್ನು ಕೂಡಲೇ ನೇಮಿಸಿಕೊಳ್ಳಬೇಕು ಇದರಿಂದ ಪ್ರತಿಯೊಬ್ಬ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಲು ಪ್ರತಿಕೂಲ ಸನ್ನಿವೇಶದಲ್ಲಿ ರಕ್ಷಣೆ ಮಾಡಿಕೊಳ್ಳಲು ಉಪಯೋಗವಾಗಲಿದೆ ಎಂದು ಹಾಲುಮತ ಸಮಾಜದ ಯುವ ಚಿಂತಕರು ಶಿವಶಂಕರ ಗುಂಡುಗುರ್ತಿ ಸರ್ಕಾರಕ್ಕೆ ಅಗ್ರಹಿಸಿದ್ದಾರೆ ಅಷ್ಟೇ ಅಲ್ಲದೆ ವಿವಿಧ ಸಂಘಗಳ ಸಹಕಾರದೊಂದಿಗೆ ಮುಖ್ಯಮಂತ್ರಿಗಳಿಗೆ ಶಿಕ್ಷಣ ಸಚಿವರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವಸತಿ ಸಚಿವರಿಗೆ ಕೂಡಲೇ ಮನವಿ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ ಅಲ್ಲದೆ ರಾಷ್ಟ್ರೀಯ ಮಾಧ್ಯಮಕ ಯೋಜನಾ ಅಡಿಯಲ್ಲಿ ಹೈಸ್ಕೂಲು ವಿದ್ಯಾರ್ಥಿನಿಯರ ಸ್ವಯಂ ರಕ್ಷಣಾ ತರಬೇತಿ ಸ್ಥಗಿತಗೊಳಿಸಲಾಗಿದ್ದು ಕೂಡಲೇ ಈ ಕಾರ್ಯಕ್ರಮ ಪುನರ್ ಆರಂಭಿಸಬೇಕು ಎಂದು ತಿಳಿಸಿದ್ದಾರೆ.ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಕಾಲೇಜುಗಳಲ್ಲಿ ಕರಾಟೆ ತರಬೇತಿ ನೀಡಲು ಪ್ರತ್ಯೇಕ ಬಜೆಟ್ ನೀಡಬೇಕು ಇದರಿಂದ ಈ ಭಾಗದ ವಿದ್ಯಾರ್ಥಿನಿಯರಿಗೆ ಸಮರ್ಥ ರೀತಿಯಲ್ಲಿ ಉಪಯೋಗವಾಗಲಿದೆ ಎಂದು ಹಾಲುಮತ ಸಮಾಜದ ಪ್ರಗತಿಪರ ಚಿಂತಕರು ಶಿವಶಂಕರ ಗುಂಡುಗುರ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.