ಹನೂರು:ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂದು ಶಕ್ತಿ ಯೋಜನೆಗೆ ಶಾಸಕ ಎಂ.ಆರ್.ಮಂಜುನಾಥ್ ಅವರು ಟೇಪ್ ಕತ್ತರಿಸಿ ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಶಾಸಕ ಎಂ.ಆರ್.ಮಂಜುನಾಥ್ ಅವರು ಮಾತನಾಡಿ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಅನುಕೂಲವಾಗುವಂತೆ ಶಕ್ತಿ ಯೋಜನೆ ಜಾರಿಗೆ ತಂದಿದೆ ಶಕ್ತಿ ಯೋಜನೆ ಬಹಳ ಉಪಯುಕ್ತ ಕಾರ್ಯಕ್ರಮ ನಿರಂತರವಾಗಿ ಇರಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಹಾಗೂ ಇಂದಿರಾ ಕ್ಯಾಂಟೀನ್ ಬಿಜೆಪಿ ಸರ್ಕಾರ ರದ್ದು ಮಾಡಿದ್ದು ವಿಷಾದನೀಯ ಯಾವುದೇ ಸರ್ಕಾರ ಬರಲಿ ಬಡ ಜನರ ಹಾಗೂ ರೈತರ ಪರವಾಗಿ ಇರಬೇಕು ಎಂದರು.
ಬಸ್ ನಿಲ್ದಾಣದಲ್ಲಿ ಶುಚಿತ್ವ ಕಾಪಾಡಲು ಮುಂದಾಗಬೇಕು,ಅಗತ್ಯವಿರುವ ಕಡೆಗಳಲ್ಲಿ ಹೊಸ ಬಸ್ ರೂಟ್ ವ್ಯವಸ್ಥೆ ಮಾಡಿ ಶಿಕ್ಷಕರು, ವಿದ್ಯಾರ್ಥಿಗಳಿಗೆ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೆ ವೇಳೆ ಶೌಚಲಯಗಳು ಹಾಗೂ ಬಸ್ ನಿಲ್ದಾಣದ ಆವರಣ ಸ್ಥಳ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಕೊಳ್ಳೇಗಾಲ ಹನೂರು ಉಪ ತಹಸಿಲ್ದಾರ್ ಧನಂಜಯ್,ವಲಯದ ವ್ಯವಸ್ಥಾಪಕ ಸೂರ್ಯಕಾಂತ್,ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್,ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್,ಪಟ್ಟಣ ಪಂಚಾಯತಿ ಸದಸ್ಯರಾದ ಆನಂದ್ ಸಂಪತ್ ಮಹೇಶ್ ನಾಯಕ್ ಸೇರಿದಂತ ಮಹಿಳಾ ಸಂಘದ ಪದಾಧಿಕಾರಿಗಳು ಸಾರ್ವಜನಿಕರು ಇದ್ದರು.
ವರದಿ:ಉಸ್ಮಾನ್ ಖಾನ್