ಯಡ್ರಾಮಿ ತಾಲೂಕಿನ ದಂಡಾಧಿಕಾರಿಗಳಾದ ಶ್ರೀಮತಿ ಶಶಿಕಲಾ ಪಾದಗಟ್ಟಿ ಹಾಗೂ ಉಪ ತಹಸಿಲ್ದಾರ್ ಅಧಿಕಾರಿಗಳಾದ ಸತ್ಯ ಪ್ರಸಾದರಾವ ಎಂ ಅವರ ನೇತೃತ್ವದಲ್ಲಿ ಕರ್ನಾಟಕ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಕಾರ್ಯಕ್ರಮ ತಾಲೂಕಿನ ಬಸ್ ನಿಲ್ದಾಣದ ಆವರಣದಲ್ಲಿ ಜ್ಯೋತಿ ಬೆಳಗಿಸುವುದರ ಮುಖಾಂತರ ದಂಡಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಈ ಸಂದರ್ಭದಲ್ಲಿ ತಾಲೂಕಿನ ದಂಡಾಧಿಕಾರಿಗಳು ಈ ಕಾರ್ಯಕ್ರಮದ ಕುರಿತು ಮಾತನಾಡಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯು ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ ಎಲ್ಲಾ ವಯೋಮಾನದ ಮಹಿಳೆಯರಗೋಸ್ಕರವೇ ಜಾರಿಗೆ ತಂದಿದ್ದು ಈ ಯೋಜನೆಯ ಸದುಪಯೋಗ ತಾಲೂಕಿನ ಎಲ್ಲಾ ಹೆಣ್ಣು ಮಕ್ಕಳು ಪಡೆದುಕೊಳ್ಳಲು ಕರೆ ನೀಡಿದರು ಈ ಸಂದರ್ಭದಲ್ಲಿ ಸಮಾಜ ಸೇವಕರು ವಿಜಯಕುಮಾರ್ ಮಲ್ಲೇದ ಹಾಗೂ ಮಾನಪ್ಪ ಕಟ್ಟಿಮನಿ ಸಂತೋಷ್ ಕುಮಾರ್ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
