ಬೆಳಗಾವಿ/ಗೋಕಾಕ:
ದಿನಾಂಕ 14-06-2023 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಗೋಕಾಕ ನಗರದ ತಾಲೂಕಾ ಪಂಚಾಯತ ಕಚೇರಿಯಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದು ನಿರ್ಧಾರಿತ ಸಮಯದಲ್ಲಿ ಅವುಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿ ಎರಡು ತಾಲ್ಲೂಕುಗಳಿಗೆ ಅವಶ್ಯಕತೆ ಇರುವ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ತಿಳಿಸಿದರು.
ಜನರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಬೇಕು.ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು.ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಹಾಗೂ ಶಾಲೆಗಳ ಅಭಿವೃದ್ಧಿಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು
ವರದಿ : ಬಿ ಎಸ್ ಬಿರಾದರ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.