ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ ಹಗರಣಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ:ಪ್ರಿಯಾಂಕ್ ಖರ್ಗೆ

ಕಲಬುರ್ಗಿ:ಕಲಬುರ್ಗಿ ಜಿಲ್ಲಾ ಉಸ್ತುವಾರಿ,ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ ಹಗರಣಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸುತ್ತೇವೆ ಎಂದು ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳ ಬಗ್ಗೆ ತನಿಖೆಗೆ ವಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ಹಗರಣವನ್ನು ಯಾವ ಯಾವ ತಂಡಗಳಿಂದ ತನಿಖೆ ನಡೆಸಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಬೇಕಾಗಿದೆ ತನಿಖೆಗಳನ್ನೂ ಬೇರೆ ಬೇರೆ ರೀತಿಯಾಗಿ ನಡೆಸಬೇಕಾಗುತ್ತದೆ
ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.
ಕೆಪಿಟಿಸಿಎಲ್,ಬಿಟ್ ಕಾಯಿನ್,ಪಿಎಸ್ಐ, ಸಹಾಯಕ ಪ್ರಾಧ್ಯಾಪಕ ನೇಮಕ ಅವಧಿಯಲ್ಲಿ ಆದ ಪ್ರಕರಣಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸುವಂತೆ ಸೈಬರ್ ತನಿಖೆ ತಂಡ ಹಾಗೂ ಎಸ್ಐಟಿ ತನಿಖೆ ತಂಡ ಮಾಡುತ್ತದೆ ಕೆಲವು ಇಲಾಖೆಗಳ ತನಿಖೆ ಮಾಡಲಾಗುವುದು ಮತ್ತು ಕೆಲವೊಂದು ಪ್ರಕರಣಗಳು ನ್ಯಾಯಾಂಗ ತನಿಖೆ ವಹಿಸಬೇಕಾಗುತ್ತದೆ ಯಾವ-ಯಾವ ಹಗರಣಗಳು ಯಾವ ರೀತಿಯಲ್ಲಿ ನಡೆದಿವೆ ಎಂಬುವುದರ ಆಧಾರದ ಮೇಲೆ ತನಿಖೆ ನಿರ್ಧಾರವಾಗುತ್ತದೆ ಎಂದರು.
ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾವು ಜನರಿಗೆ ಹಗರಣಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸುತ್ತೇವೆ ಎಂದು ಭರವಸೆ ನೀಡಿದ್ದೆವು ಅದಕ್ಕೆ ನಾವು ಬದ್ಧವಾಗಿದ್ದು,ತನಿಖೆ ಮಾಡಿಸುತ್ತೇವೆ. ಗಂಗಾಕಲ್ಯಾಣ,ಪಿಎಸ್ಐ,ಬಿಟ್ ಕಾಯಿನ್, ಕೆಪಿಟಿಸಿಎಲ್ ನೇಮಕಾತಿ,ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಳ ಹಗರಣ, ಕೋವಿಡ್ ಸಮಯದಲ್ಲಿ ಆದ ಭ್ರಷ್ಟಾಚಾರ ಸೇರಿದಂತೆ ಅನೇಕ ವಿಚಾರಗಳನ್ನು ತನಿಖೆಗೆ ಒಳಪಡಿಸುತ್ತೇವೆ ಎಂದು ಹೇಳಿದರು.
ಭ್ರಷ್ಟಾಚಾರದಲ್ಲಿ ಭಾಗಿ ಆದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ.
ಹಗರಣದಲ್ಲಿ ಸಚಿವರು,ಶಾಸಕರು ಯಾರೇ ಭಾಗಿಯಾಗಿದ್ದರೂ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಬಿಜೆಪಿಯವರ ಹಗರಣದಲ್ಲಿ ಕಾಂಗ್ರೆಸ್ ನವರೇ ಸಿಲುಕಿಕೊಳ್ಳುತ್ತಾರೆ ಎಂದು ಆರೋಪ ಮಾಡುತ್ತಿದ್ದರು ಯಾರು ತಪ್ಪು ಮಾಡಿದ್ದಾರೋ ಅವರು ಈ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ ತನಿಖೆ ನಡೆಸಿದಾಗ ಮಾತ್ರ ಸತ್ಯಾಂಶ ಹೊರಬರಲಿದೆ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಪ್ರಾಮಾಣಿಕವಾಗಿ ಕೆ.ಪಿ.ಎಸ್.ಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ನೇಮಕಾತಿ ಸಂಬಂಧಿಸಿದ ಪರೀಕ್ಷೆ ಬರೆದಿರುವ 20 ರಿಂದ 30 ಲಕ್ಷ ಅಭ್ಯರ್ಥಿಗಳಿದ್ದಾರೆ ಅವರ ಭವಿಷ್ಯ ಏನಾಗಬೇಕು?ನಮಗೆ ಯುವಕರ ಭವಿಷ್ಯ ಮುಖ್ಯ ಹೀಗಾಗಿ ಯಾರೇ ತಪ್ಪು ಮಾಡಿದರೂ ನಿರ್ದಾಕ್ಷಿಣ್ಯವಾಗಿ ಅವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಈ ಹಗರಣಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ಹೈಕಮಾಂಡ್ ನೀಡುವುದರಲ್ಲಿ ತಪ್ಪೇನು?
ಕಾಂಗ್ರೆಸ್ ಪಕ್ಷದ ರಾಜ್ಯದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರಿಗೆ ಸಚಿವರ ನಿಯೋಗ ಭೇಟಿಯಾಗುವ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,ಸಚಿವರ ನಿಯೋಗ ಹೈಕಮಾಂಡ್ ಭೇಟಿಯಾಗುವುದರಲ್ಲಿ ಯಾವುದೇ ತಪ್ಪಿಲ್ಲ. ವರಿಷ್ಠರನ್ನು ಭೇಟಿ ಮಾಡಿ ಸಲಹೆ, ಮಾರ್ಗದರ್ಶನ ಪಡೆಯುತ್ತಾರೆ. ಹೈಕಮಾಂಡ್ ನೀಡುವ ಸೂಕ್ತ ಸಲಹೆಗಳನ್ನು ಜಾರಿ ಮಾಡಲು ಯೋಚಿಸುತ್ತಾರೆ. ಇದೊಂದು ಸೌಜನ್ಯ ಭೇಟಿಯಾಗಲಿದ್ದು. ಇದೇ ತಿಂಗಳು 20 ಮತ್ತು 21 ರಂದು ಭೇಟಿಯಾಗುವ ಸಾಧ್ಯತೆ ಇದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ನಾವು ಪಡೆದುಕೊಳ್ಳುತ್ತವೆ ಗಂಗಾಕಲ್ಯಾಣ ಯೋಜನೆ ಅಕ್ರಮ ಕುರಿತಂತೆ ವಿಧಾನಸೌಧ ಪೋಲಿಸ್ ಠಾಣೆಯಲ್ಲಿ 2 ಎಫ್ಐಆರ್ ಗಳು ದಾಖಲಾಗಿವೆ ಕಲ್ಯಾಣ ಕರ್ನಾಟಕ ಯೋಜನೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮವಾಗಿದೆ ಇದು ಇಲಾಖೆವಾರು ತನಿಖೆ ನಡೆಯುತ್ತಿದೆ. ಉನ್ನತಾಧಿಕಾರಿಗಳ ತನಿಖಾ ತಂಡ ನೇಮಿಸಿ ಹಂತಹಂತವಾಗಿ ತನಿಖೆ ನಡೆಸುತ್ತೇವೆ ಎಂದು ಹೇಳಿದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ