ಕಲಬುರ್ಗಿ:ಜೇವರ್ಗಿ ತಾಲೂಕಿನ ನೆಲೋಗಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಕರ್ತವ್ಯದ ಮೇಲಿದ್ದ ಮುಖ್ಯಪೇದೆ ಮಯೂರ್ ಚವ್ಹಾಣ್ ಅವರ ಮೇಲೆ ಹರಿದು ಬಂದ ಟ್ರ್ಯಾಕ್ಟರ್ ನಿಂದ ಸ್ಥಳದಲ್ಲೇ ಪೇದೆ ಸಾವು ಈ ಘಟನೆ ತಿಳಿದ ಶಾಸಕ ಅಜೇಯ್ ಸಿಂಗ್ ಅವರು ಖಂಡಿಸಿ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ಹೇಳಿದರು.
ಈ ಘಟನೆ ಕುರಿತು ಪತ್ರಿಕಾ ಹೇಳಿಕೆ ನೀಡಿ ಘಟನೆ ತಿಳಿದ ಕೂಡಲೇ ರಾಜ್ಯದ ಗೃಹ ಸಚಿವ ಡಾ.ಪರಮೇಶ್ವರ ಅವರೊಂದಿಗೆ ಮಾತುಕತೆ ನಡೆಸಿರುವೆ ತಕ್ಷಣಕ್ಕೆ ಗೃಹ ಸಚಿವರು ಮೃತ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು ಮೃತ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಮನವಿ ಮಾಡಲಾಗಿದೆ. ಅಕ್ರಮ ಮರಳು ಗಣಿಗಾರಿಕೆ ಅವಕಾಶ ಕೊಡಬಾರದು ಎಂದು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಡಲಾಗಿದೆ.
ಈ ಘಟನೆ ನಡೆದ ಕೂಡಲೇ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಧಿಕಾರಿ ಇಶಾಪಂತ್ ಹಾಗೂ ಜಿಲ್ಲಾಧಿಕಾರಿ ಯಶವಂತ ಗುರುಕರ ಇಬ್ಬರೂ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ ಇನ್ನು ಮುಂದೆ ಇಂತಹಾ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ ಎಂದು ಮಾಹಿತಿ ಬಂದಿದೆ.
ವರದಿ ರಾಜಶೇಖರ ಮಾಲಿ ಪಾಟೀಲ್ ಕಲಬುರ್ಗಿ