ಕಲಬುರ್ಗಿ:ಯಡ್ರಾಮಿ ತಾಲೂಕಿನ ಹುಲ್ಲೂರು ಗ್ರಾಮದ ಬಳಿ ಗುರುವಾರ ರಾತ್ರಿ ನಡೆದು ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಮಾಹಿತಿ ತಿಳಿದ ಪೊಲೀಸರು ತಡೆಯಲು ಮುಂದಾದ ನೆಲೋಗಿ ಪೋಲಿಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಯೂರ್ ಚವ್ಹಾಣ್ ಅವರು ಮೇಲೆ ಚಾಲಕ ಸಿದ್ದಣ್ಣ ಕರ್ಜಗಿ ಏಕಾಏಕಿ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಿದ್ದ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ.ಸಾಯಿಬಣ್ಣ ಹೆಸರಿನಲ್ಲಿ ಇತ್ತು ಹೀಗಾಗಿ ಆತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು ಪೊಲೀಸರು ಶನಿವಾರ ವಿಜಯಪುರ ಜಿಲ್ಲೆಯ ಆಲಮೇಲ ನಗರದಲ್ಲಿ ಆರೋಪಿಯನ್ನು ಬಂಧಿಸಿ ಕರೆ ತರುತ್ತಿದ್ದರು.
ಯಡ್ರಾಮಿ ಪಿಎಸ್ಐ ಬಸವರಾಜ ಚಿತಕೋಟೆ,ಜೇವರ್ಗಿ ಪಿಎಸ್ಐ ಸಂಗಮೇಶ ಅಂಗಡಿ ಹಾಗೂ ಪಿಎಸ್ಐ ಗುರುಬಸಪ್ಪ ಆರೋಪಿಯನ್ನು ವಾಹನದಲ್ಲಿ ಕರೆ ತರುವ ವೇಳೆ ಮಾರ್ಗ ಮಧ್ಯದಲ್ಲಿ ನಿಸರ್ಗ ಕೆರೆಗೆ ಇಳಿದಿದ್ದ ಸಾಯಿಬಣ್ಣ ಏಕಾಏಕಿ ಚಾಕುವಿನಿಂದ ಇರಿದು ಪಿಎಸ್ಐ ಬಸವರಾಜ ಚಿತಕೋಟೆ ಮೇಲೆ ಹಲ್ಲೆ ಮಾಡಿದ್ದಾರೆ ಕೈಗೆ ಮತ್ತು ಹೊಟ್ಟೆಯ ಭಾಗಕ್ಕೆ ಗಾಯವಾಗಿದೆ. ಆರೋಪಿ ತಪ್ಪಿಸಿಕೊಂಡು ಓಡಿ ಹೋಗುವ ವೇಳೆ ವಾಹನದಲ್ಲೇ ಇದ್ದ ಇನ್ನೊಬ್ಬ ಪಿಎಸ್ಐ ಸಂಗಮೇಶ ಸರ್ವಿಸ್ ರಿವಾಲ್ವರ್ ನಿಂದ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿರುವ ಸಾಯಿಬಣ್ಣ ವಿರುದ್ಧ ಜೇವರ್ಗಿ ಪೋಲಿಸ್ ಠಾಣೆಯಲ್ಲಿ ರೌಡಿ ಶೀಟರ್ ಪಟ್ಟಿಯಲ್ಲಿ ಹೆಸರು ದಾಖಲಿಸಲಾಗಿದೆ.
ವರದಿ-ರಾಜಶೇಖರ ಮಾಲಿ ಪಾಟೀಲ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.