ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿಸರ ರಾಜ್ಯ ಪ್ರಶಸ್ತಿ:ಸಿಂಧನೂರಿಗೆ ಸಿಹಿ ಹಂಚಿ ಸಂಭ್ರಮ

ರಾಯಚೂರು ಜಿಲ್ಲೆಯ ಸಿಂಧನೂರಿನ ಪಿ.ಡಬ್ಲ್ಯೂ.ಡಿ.ಕ್ಯಾಂಪ್ ನ ಚನ್ನಬಸವೇಶ್ವರ ನಗರದ
ಶ್ರೀ ಶಿವಾಲಯ ದೇವಸ್ಥಾನದಲ್ಲಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಪರಿಸರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ “ಕರ್ನಾಟಕ ಪರಿಸರ ರಾಜ್ಯ ಪ್ರಶಸ್ತಿ”ಯನ್ನು ಪಡೆದ ಸಿಂಧನೂರಿನ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷ ಅಮರೇಗೌಡ ಮಲ್ಲಾಪೂರ ಮತ್ತು ಕೃಷಿ ಇಲಾಖೆಯ ನಿವೃತ್ತ ಅಧಿಕಾರಿಗಳಾದ ಶರಣಬಸವ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಸಿಂಧನೂರಿನ ವನಸಿರಿ ಫೌಂಡೇಶನ್ ಗೆ ರಾಜ್ಯ ಪ್ರಶಸ್ತಿ ಲಭಿಸಿರುವುದು ಇಡೀ ರಾಜ್ಯಕ್ಕೆ ಕೀರ್ತಿ ತಂದಿರುವ ಕಾರಣ ಶ್ರೀ ಶಿವಾಲಯ ಟ್ರಸ್ಟ್ ಅದ್ಯಕ್ಷರು,ಪದಾಧಿಕಾರಿಗಳು ಹಾಗೂ ವನಸಿರಿ ಫೌಂಡೇಶನ್ ಸದಸ್ಯರು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪೂರ,ಶ್ರೀ ಶಿವಾಲಯ ಟ್ರಸ್ಟ್ ಅದ್ಯಕ್ಷರಾದ ವೀರೇಶ ಸಾನಬಾಳ,ಕೃಷಿ ಇಲಾಖೆಯ ನಿವೃತ್ತ ಅಧಿಕಾರಿಗಳಾದ ಶರಣಬಸವ,ವನಸಿರಿ ತಂಡದ ಸದಸ್ಯರಾದ ವೀರಭದ್ರಯ್ಯ ಸ್ವಾಮಿ ತಿಮ್ಮಾಪೂರ, ವೆಂಕಟರಡ್ಡಿ ಹಡಗಿನಾಳ ಹಾಗೂ ಸಿಂಧನೂರ ಚನ್ನಬಸವ ನಗರದ ಶ್ರೀ ಶಿವಾಲಯ ದೇವಸ್ಥಾನ ಟ್ರಸ್ಟ್ ಆಡಳಿತ ಮಂಡಳಿಯ ಸದಸ್ಯರು ವನಸಿರಿ ತಂಡದ ಸದಸ್ಯರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ