ಬೀದರ:ಔರಾದ ತಾಲೂಕಿನಲ್ಲಿ ಪ್ರಸ್ತುತ ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಆತಂಕದಲ್ಲಿದ್ದಾರೆ ಹಾಗಾಗಿ ಈ ವರ್ಷ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ.ಚವ್ಹಾಣ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಪ್ರತಿ ವರ್ಷ ತಮ್ಮ ಜನ್ಮದಿನವಾದ ಜುಲೈ 6ರಂದು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸೇರಿ ಅದ್ದೂರಿ ಕಾರ್ಯಕ್ರಮ ಆಯೋಜಿಸುತ್ತಿದ್ದರು.
ಸದ್ಯ ಸಮರ್ಪಕ ಮಳೆಯಾಗದ ಕಾರಣ ರೈತರು ಆತಂಕದಲ್ಲಿದ್ದಾರೆ ಇಂತಹ ಸಂದರ್ಭದಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಜನ್ಮದಿನ ಆಚರಿಸಿಕೊಂಡು ಸಂಭ್ರಮಿಸುವುದು ಸರಿಯಲ್ಲವೆಂಬ ಕಾರಣಕ್ಕೆ ಈ ವರ್ಷ ಜನ್ಮದಿನ ಆಚರಿಸಿಕೊಳ್ಳಬಾರದೆಂದು ತೀರ್ಮಾನಿಸಿದ್ದೇನೆ.ಅಭಿಮಾನಿಗಳು ಮತ್ತು ಕಾರ್ಯಕರ್ತರು ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ ಹಾಗೆಯೇ ಜನ್ಮದಿನದಂದು ಯಾವುದೇ ರೀತಿಯ ವಿಜೃಂಬಣೆಯ ಆಚರಣೆಗಳನ್ನು ಮಾಡಬಾರದು ಹೂವು,ಹಾರಗಳಿಗೆ ಹಣ ಖರ್ಚು ಮಾಡದೇ ಸಸಿ ನೆಡುವುದು ಹಾಗೂ ಸ್ವಚ್ಛತಾ ಕಾರ್ಯಕ್ರಮ,ರೋಗಿಗಳಿಗೆ ಹಣ್ಣು ವಿತರಿಸುವುದು, ರಕ್ತದಾನದಂತಹ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಅಭಿಮಾನಿಗಳಲ್ಲಿ ಮತ್ತು ಕಾರ್ಯಕರ್ತರಲ್ಲಿ ವಿನಂತಿಸಿದ್ದಾರೆ.
ಪ್ರತಿ ವರ್ಷ ಜನ್ಮದಿನದ ನಿಮಿತ್ತ ಸಾಧಕ ವಿದ್ಯಾರ್ಥಿಗಳು ಮತ್ತು ಪಾಲಕರನ್ನು ಗೌರವಿಸಲಾಗುತ್ತಿತ್ತು ಜನ್ಮದಿನ ಆಚರಣೆ ಇಲ್ಲದ ಕಾರಣ ಮುಂದಿನ ದಿನಗಳಲ್ಲಿ ಸನ್ಮಾನಿಸಲಾಗುತ್ತದೆ ಎಂದಿದ್ದಾರೆ ಈ ಬಾರಿಯೂ ಕ್ಷೇತ್ರದ ಸಾಕಷ್ಟು ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉತಿರ್ಣರಾಗಿ ತಾಲೂಕಿನ ಕೀರ್ತಿ ಹೆಚ್ಚಿಸಿದ ಆ ಎಲ್ಲಾ ಮಕ್ಕಳಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ:ಅಮರ ಮುಕ್ತೆದಾರ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.