ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವಿಧ ಬೇಡಿಕೆ ಈಡೇರಿಸುವಂತೆ ಸಚಿವರಿಗೆ ಡಿವಿಪಿ ಮನವಿ

ಬೆಂಗಳೂರು:ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ವಾಸಿಸುತ್ತಿರುವ ವಸತಿ ನಿಲಯಗಳಲ್ಲಿನ ಕುಂದುಕೊರತೆಗಳನ್ನು ಸರಿಪಡಿಸಬೇಕು ಮತ್ತು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ವಿವಿಧ ಸ್ನಾತಕೋತ್ತರ ಮತ್ತು ಪಿಎಚ್ ಡಿ ಮತ್ತು ಡಿಪ್ಲೋಮಾ, ವೃತ್ತಿಪರ ಕೊರ್ಸುಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಶುಲ್ಕ ಹೆಚ್ಚಿಸಿದ್ದು ಅಲ್ಲದೇ ಮುಂಚಿತವಾಗಿಯೇ ಶುಲ್ಕವನ್ನು ತುಂಬಬೇಕು ಇಲ್ಲದೇ ಹೋದರೇ ತರಗತಿಗೆ ಅನುಮತಿ ಕೊಡುವುದಿಲ್ಲ, ಪರೀಕ್ಷೆಗೂ ಅನುಮತಿಸುವುದಿಲ್ಲ ಎಂಬಂತಹ ಬೆದರಿಗಳನ್ನು ವಿದ್ಯಾರ್ಥಿಗಳಿಗೆ ಒಡ್ಡಿ ಶುಲ್ಕಗಳನ್ನು ವಸೂಲಿ ಮಾಡಬಾರದು ಎಂದು ಲೋಕೋಪಯೋಗಿ ಸಚಿವರಾದ ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಅವರಿಗೆ ವಿಧಾನಸೌಧದಲ್ಲಿ ಇಂದು ಡಿವಿಪಿ ಮನವಿ ಮಾಡಲಾಯಿತು.ನಿನ್ನೆ ಧಾರವಾಡ ಜಿಲ್ಲಾ ಘಟಕವು ಕರ್ನಾಟಕ ವಿಶ್ವವಿದ್ಯಾಲಯದ ಪ. ಜಾತಿ / ಪ. ಪಂಗಡದ ವಿದ್ಯಾರ್ಥಿಗಳಿಗೆ ಸತತವಾಗಿ ನಾಲ್ಕು ವರ್ಷಗಳಿಂದ ನಿಲ್ಲಿಸಲಾಗಿದ್ದ ಲ್ಯಾಪ್ ಟಾಪ್ ವಿತರಣೆಯ ಕಾರ್ಯವನ್ನು ಪುನಃ ಪ್ರಾರಂಭಿಸಿ ವಂಚಿತಗೊಂಡ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಸೌಲಭ್ಯ ಕಲ್ಪಿಸಿಕೊಡಬೇಕು,ವಿವಿಧ ಪದವಿ, ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಬೇಗನೇ ಮಂಜೂರಾಗಬೇಕು,ವಿಶ್ವವಿದ್ಯಾಲಯಕ್ಕೆ ಒಳಪಡುವ ಎಲ್ಲಾ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಮಾಸಿಕ ಶಿಷ್ಯವೇತನವನ್ನು ಇಂದಿನ ಮಾರುಕಟ್ಟೆಯ ದರವನ್ನು ಗಮನದಲ್ಲಿಟ್ಟುಕೊಂಡು 5000ಕ್ಕೆ ಹೆಚ್ಚಿಸಬೇಕು,ಕಾನೂನು ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿದ್ದ ಮಾಸಿಕ ಶಿಷ್ಯವೇತನವನ್ನು ಪುನಃ ಪ್ರಾರಂಭಿಸಿ ಮಾರುಕಟ್ಟೆಯ ಆಧಾರದ ಮೇಲೆ ನಿಗದಿಸಬೇಕು,ಸ್ನಾತಕೋತ್ತರ ವಿದ್ಯಾರ್ಥಿಗಳು ಮಾಡುವ ಕ್ಷೇತ್ರಕಾರ್ಯ ಅಧ್ಯಯನ ವರದಿಗಾಗಿ ರೂ.10,000ವರೆಗೆ ದೊರೆಯುವಂತಾಗಬೇಕು, ವಿಶ್ವವಿದ್ಯಾಲಯದಲ್ಲಿ ಅಭ್ಯಾಸಿಸುತ್ತಿರುವ ಪ.ಜಾತಿ /ಪ.ಪಂಗಡದ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ, ಡಿಪ್ಲೋಮ ಹಾಗೂ ವಸತಿ ನಿಲಯದ ಪ್ರವೇಶ ಶುಲ್ಕಗಳನ್ನು ಹೆಚ್ಚಿಸಿದ್ದು ಅದನ್ನು ಕಡಿತಗೊಳಿಸಬೇಕು, ಮ್ಯಾನೇಜ್ಮೆಂಟ್ ಕೋಟಾದಡಿಯಲ್ಲಿ ಪ್ರವೇಶ ಪಡೆದ ಪದವಿ,ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಹಾಗೂ ಶಿಷ್ಯವೇತನ ಮಂಜೂರು ಮಾಡಬೇಕು ಹೀಗೆ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಈ ವೇಳೆ ಜಿಲ್ಲಾ ಅಧ್ಯಕ್ಷರಾದ ಹನುಮಂತ ದಾಸರ, ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಹಾಸಟ್ಟಿ, ಸಂಗಮೇಶ ಬನಸೋಡೆ,ಕುಮಾರ್ ತಳವಾರ ಹಾಗೂ ಬಸವರಾಜ್.ಎಚ್.ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!