ಯಾದಗಿರಿ:ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಗೆ ಆನ್ ಲೈನ್ ಮೂಲಕ ಸಲ್ಲಿಸಲು ಜಿಲ್ಲೆಯ ಎಲ್ಲಾ ತಾಲೂಕ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಾರ್ವಜನಿಕರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗರಿಮಾ ಪನ್ವಾರ ಅವರು ಹೇಳಿದರು.
ಕರ್ನಾಟಕ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಜ್ಯೋತಿ ಯೋಜನೆ ಆಗಸ್ಟ್ 1 ರಂದು ಈ ಯೋಜನೆಗೆ ಜಾರಿಗೆ ತರಲಾಗುತ್ತದೆ ಎಂದು ಹೇಳಿದರು ಗೃಹ ಜ್ಯೋತಿ ಯೋಜನೆಗೆ ಸಾರ್ವಜನಿಕರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.
ಗ್ರಾಮೀಣ ಭಾಗದ ಜನರು ತಮ್ಮ ಸಾಮಾಜಿಕ, ಶೈಕ್ಷಣಿಕ,ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗೆ ಇಲಾಖೆಯಿಂದ ಹಲವಾರು ದಾಖಲೆ ಪಡೆಯುವ ಮೂಲಕ ಮನಗಂಡ ರಾಜ್ಯ ಸರ್ಕಾರದಿಂದ ಬಾಪೂಜಿ ಸೇವಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.