ಕೊಟ್ಟೂರು:ತಾಲೂಕಿನ ಗ್ರಾಮ ಪಂಚಾಯಿತಿ ನೌಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಬಿ.ಎಂ. ಪ್ರವೀಣ್ ಆಯ್ಕೆಯಾಗಿದ್ದಾರೆ.
ಐನಳ್ಳಿ ಗ್ರಾಮದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಸಂಯೋಜಿತ ಮತ್ತು ಹಾಗೂ ವಿಜಯನಗರ ಜಿಲ್ಲಾ ಗ್ರಾಮ ಪಂಚಾಯಿತಿ ನೌಕರರ ಸಂಘ ಕೊಟ್ಟೂರು ತಾಲೂಕು ಗ್ರಾಮ ಪಂಚಾಯಿತಿ ಜಿಲ್ಲಾ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಸಮಾವೇಶದಲ್ಲಿ ಇವರನ್ನು ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದರು. ಇವರು
ಆಯ್ಕೆಯಾದ ಹಿನ್ನೆಲೆಯಲ್ಲಿ ತಾಲೂಕಿನ ಗ್ರಾಮ ಪಂಚಾಯತಿ ನೌಕರರು ಮತ್ತು ಐನಳ್ಳಿಯ ಗ್ರಾಮಸ್ಥರು ಅಭಿನಂದನೆಗಳನ್ನು ತಿಳಿಸಿದ್ದಾರೆ.
