ಬೆಳಗಾವಿ:ಕಕಮರಿಯ ಶ್ರೀ ಸದ್ಗುರು ರಾಯಲಿಂಗೇಶ್ವರ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜರುಗಿದ ಸನ್ 2023-24 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ,ಸಾಂಸ್ಕೃತಿಕ,ಕ್ರೀಡಾ ಘಟಕಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಹಾಗೂ ಉದ್ಘಾಟಿಸಿದ ರಾಯಲಿಂಗೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಅಭಿನವ ಗುರುಲಿಂಗಜಂಗಮ ಮಹಾಸ್ವಾಮಿಜಿ ಮಾತನಾಡಿ ನಿಜವಾದ ಶಿಕ್ಷಣವೆಂದರೆ ಮಕ್ಕಳಿಗೆ ಸಂಸ್ಕಾರ,ದೇಶಪ್ರೇಮ ಹಾಗೂ ಸಮಾನತೆ ಎಂದು ಪ್ರೇರಣಾದಾಯಕ ಮಾತುಗಳನ್ನಾಡಿದರು ಹಾಗೂ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ನೀಡುವ ಮೂಲಕ ತಂದೆ ತಾಯಿ ಹಾಗೂ ಕಲಿಸಿದ ಗುರುಗಳಿಗೆ ಹೆಮ್ಮೆ ತರುವಂತರಾಗಿ ಎಂದು ಆಶೀರ್ವದಿಸಿದರು. ನೇತೃತ್ವ ವಹಿಸಿದ್ದ ಮಾತೋಶ್ರೀ ನೀಲಮ್ಮ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶಿವಗುರು ಬಸರಗಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಎಸ್ ಟಿ ಮಜ್ಜಗಿಯವರು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನಗೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯಂತಹ ಸಂಘಟನೆಗಳಲ್ಲಿ ಭಾಗವಹಿಸಬೇಕು ಹಾಗೂ ತಮ್ಮನ್ನು ತಾವು ತೊಡಿಗಿಸಿಕೊಳ್ಳಬೇಕು. ಚಿಕ್ಕೋಡಿಯ ಇಂಗ್ಲಿಷ್ ಉಪನ್ಯಾಸಕ ವೇದಿಕೆಯ ಅಧ್ಯಕ್ಷರಾದ ಶ್ರೀ ಎಸ್ ಡಿ ಸನಗೊಂಡರವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆ ವಾಕ್ಯವೆನೆಂದರೆ ನನಗಾಗಿ ಅಲ್ಲ ನಿಮಗಾಗಿ ಎಂಬ ಮಹತ್ತರವಾದ ವಿಷಯವನ್ನಿಟ್ಟುಕೊಂಡು ಈ ಘಟಕವನ್ನು ಸ್ಥಾಪಿಸುವ ಮೂಲಕ ಇವತ್ತು ಸಾಕಷ್ಟು ಘಟಕಗಳ ಮೂಲಕ ಉತ್ತಮ ಸಮಾಜ ನಿರ್ಮಾಣ ಕಾರ್ಯಗಳು ಜರುಗುತ್ತಿವೆ ಹಾಗೂ ರಾಯಲಿಂಗೇಶ್ವರ ಶಿಕ್ಷಣ ಸಂಸ್ಥೆಯು ಪ್ರಾರಂಭದ ದಿನಗಳ ನೆನದು ಇವತ್ತು ಹೆಮ್ಮರವಾಗಿ ಬೆಳೆದು ನಿಂತಿದ್ದೆ ಅದರ ಸಂಪೂರ್ಣ ಅಭಿನವ ಶ್ರೀಗಳ ಪ್ರಯತ್ನದ ಫಲ ಎಂದರು. ಇನ್ನೊಬ್ಬ ಅತಿಥಿಗಳಾಗಿ ಆಗಮಿಸಿದ್ದ ಅಥಣಿಯ ಸರಕಾರಿ ಪದವಿಪೂರ್ವ ಕಾಲೇಜಿನ ಇಂಗ್ಲಿಷ ಉಪನ್ಯಾಸಕರಾದ ಶ್ರೀ ಪಿ ವಾಯ್ ಕೋಳಿ ಮಗು ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಯುವುದು ಇವತ್ತಿನ ದಿನದಲ್ಲಿ ಅತಿ ಅವಶ್ಯಕ ಅಂತಹ ಶಿಕ್ಷಣ ದೊರೆಯುವುದು ಶ್ರೀಮಠದ ಶಿಕ್ಷಣ ಸಂಸ್ಥೆಯಲ್ಲಿ ಮಾತ್ರ ಹಾಗೂ ಮಗುವು ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಮತ್ತು ಶಾರೀರಿಕವಾಗಿ ಸದೃಢನಾಗುತ್ತಾನೆ ಅಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಪಾಲ್ಗೊಳ್ಳಬೇಕೆಂದು ಸ್ಪೂರ್ತಿದಾಯಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ ಸಂಗಮೇಶ ಬಸರಗಿ,ಎನ್ ಎಸ್ ಎಸ್ ಘಟಕದ ಕಾರ್ಯಕ್ರಮಾದಿಕಾರಿಗಳಾದ ಶ್ರೀ ಎಸ್ ಬಿ ಬಸರಗಿ ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು ಹಾಜರಿದ್ದರು.ಕಾರ್ಯಕ್ರಮವನ್ನು ಸಾವಿತ್ರಿ ಮೈಗೂರ, ಭವಾನಿ ಬಿರಾದಾರ ನಿರೂಪಿಸಿ ಸೋನಾಲಿ ಮಗದುಮ್ ವಂದಿಸಿದರು.
ವರದಿ : ವಿಶ್ವನಾಥ ಹರೋಲಿ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.