ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಟ್ಯೂಷನ್ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ಶಾಲಾ ಬಾಲಕಿಗೆ ಟ್ರ್ಯಾಕ್ಟರ್ ಡಿಕ್ಕಿ ಸ್ಥಳದಲ್ಲಿ ಸಾವು

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರದ ಹೊರವಲಯದ ತಿರುವೊಂದರಲ್ಲಿ ಮನೆ ಪಾಠ ಮುಗಿಸಿಕೊಂಡು ಮನೆಗೆ ವಾಪಸ್ ಆಗುಮಿಸುತ್ತಿದ್ದ ಸಿರುಗುಪ್ಪ ಶಿಕ್ಷಣ ಸಂಸ್ಥೆ (ಎಸ್ ಈ ಎಸ್) 16 ವರ್ಷದ ಮಾನ್ಯಶ್ರೀ ಹೆಸರಿನ ವಿದ್ಯಾರ್ಥಿನಿಗೆ ಟ್ರ್ಯಾಕ್ಟರ್ ಡಿಕ್ಕಿಯಾದ ಕಾರಣದಿಂದ ಸಾವನ್ನಪ್ಪಿರುವ ದುರ್ಘಟನೆ ವರದಿಯಾಗಿದೆ
ಸುದ್ದಿ ತಿಳಿದ ತಕ್ಷಣ ಹಾಗೂ ಪ್ರತ್ಯಕ್ಷ ದರ್ಶಿಗಳು ಸಿರುಗುಪ್ಪ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆತಂದರಾದರೂ ಈ ವೇಳೆಗಾಗಲೇ ವಿದ್ಯಾರ್ಥಿನಿಯ ಪ್ರಾಣಪಕ್ಷಿ ಹಾರಿಹೋಗಿತ್ತು
ಸೈಕಲ್ ಮೇಲೆ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಟ್ರ್ಯಾಕ್ಟರ್ ಡಿಕ್ಕಿಯಾದಾಗ ವಿದ್ಯಾರ್ಥಿನಿಯ ಕಿವಿಗಳಿಂದ ವಿಪರೀತ ರಕ್ತಸ್ರಾವವಾಗಿ ಮೃತಪಟ್ಟಿದ್ದಾಳೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ
ಎಸ್ ಎಸ್ ಎಲ್ ಸಿ ಓದುತ್ತಿದ್ದ ಮಾನ್ಯಶ್ರೀ ಹೆಸರಿನ ವಿದ್ಯಾರ್ಥಿನಿಗೆ ನಗರದಲ್ಲಿ ಸಂಜೆ ನಂತರದ ಅವಧಿಯಲ್ಲಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸಾವನ್ನಪ್ಪಿರುವ ಕಾರಣ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಗಿದ್ದು ಸಿರುಗುಪ್ಪ ಪೊಲೀಸ್ ಠಾಣೆಯ ಅಧಿಕಾರಿಗಳು ದೂರು ದಾಖಲಿಸಿಕೊಂಡು ಕ್ರಮ ಜರುಗಿಸುತ್ತಿದ್ದಾರೆ.
ವರದಿ-ಪವನ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ