ಜೇವರ್ಗಿ:ಕರ್ನಾಟಕ ರಾಜ್ಯದ ಮುರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಿತ್ತೂರ್ ರಾಣಿ ಚೆನ್ನಮ್ಮ ವಸತಿ ಶಾಲೆ ಡಾ.ಬಿ ಆರ್ ಅಂಬೇಡ್ಕರ್ ವಸತಿ ಶಾಲೆ,ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ ಪ್ರತಿ ವರ್ಷ ಈ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣು ಮಕ್ಕಳ ರಕ್ಷಣೆಯ ದೃಷ್ಟಿಯಿಂದ ಕರಾಟೆ ಸ್ವಯಂ ರಕ್ಷಣೆಗೆ ಸರ್ಕಾರ ಪ್ರತ್ಯೇಕವಾದ ಅನುದಾನ ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಬಿಡುಗಡೆ ಮಾಡಿದರು ಆದರೆ ಇತ್ತೀಚಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2023-24 ನೇ ಸಾಲಿನ ಕರಾಟೆ ಶಿಕ್ಷಕರ ಅನುದಾನ ನಿಲ್ಲಿಸಿದ್ದು ಯಾವ ಕಾರಣಕ್ಕಾಗಿ ಎಂದು ಆರ್ ಟಿ ಐ ಹೋರಾಟಗಾರ ಪರಶುರಾಮ ದಂಡಗುಲ್ಕರ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ ಅದೇ ರೀತಿಯಾಗಿ ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಜಾರಿಗೆ ತಂದಿದ್ದಾರೆ ಸರಿ ಆದರೆ ಅದೇ ರೀತಿಯಾಗಿ ಶಾಲೇ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಸ್ವಯಂ ರಕ್ಷಣಾ ಬಜೆಟ್ ಅನ್ನು ನಿರ್ಲಕ್ಷಮಾಡಿದ್ದು ಯಾಕೆ? ಈ ಯೋಜನೆಯ ಬಜೆಟನ್ನು ಮಂಗ ಮಾಯ ಮಾಡಿದ್ದು ಯಾರು? ಎಂದು ನನಗೆ ತಿಳಿಯದಾಗಿದೆ ಮುಂಬರುವ ದಿನಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಇವರಿಗೆ ತಕ್ಕ ಪಾಠ ಕಲಿಸಲಿದ್ದೇವೆ ಎಂದು ಜೇವರ್ಗಿ ತಾಲೂಕಿನ ಆರ್ ಟಿ ಐ ಹೋರಾಟಗಾರ ಪರಶುರಾಮ ದಂಡಗುಲ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.