ಕಲಬುರಗಿ:ಭಾರತೀಯ ವಿಜ್ಞಾನ ಸಂಸ್ಥೆಯ ಮೂರನೆಯ ಚಂದ್ರಯಾನ-3 ಉಡಾವಣೆ ಯಶಸ್ವಿಗೆ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಹರ್ಷ ವ್ಯಕ್ತಪಡಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ನಮೆಲ್ಲರ ಕನಸು,ನಿರೀಕ್ಷೆಗಳು ಚಂದ್ರನೆಡೆಗೆ ಸಾಗುತ್ತಿವೆ ಭಾರತ ಹೆಮ್ಮೆಪಡುತ್ತದೆ 45 ದಿನಗಳ ಐತಿಹಾಸಿಕ ಚಂದ್ರಯಾನ-3 ಯಶಸ್ವಿಯಾಗಿ ಆರಂಭವಾಗಿದೆ. ಆಂಧ್ರದ ಶ್ರೀಹರಿಕೋಟಾದಿಂದ ಚಂದಿರನ ಅಂಗಳಕ್ಕೆ ನೌಕೆಯನ್ನು ಉಡಾವಣೆ ಮಾಡಿದ ಇಸ್ರೋ ಈ ಪ್ರಯತ್ನದಲ್ಲಿ ಪೂರ್ಣ ಯಶಸ್ಸು ಸಾಧಿಸಲಿದೆ ಎಂಬ ವಿಶ್ವಾಸ ನನ್ನದು ಇಸ್ರೋದ ಪ್ರತಿ ಯೋಜನೆಗೂ ಕರ್ನಾಟಕದ ಕೊಡುಗೆ ಇರುತ್ತದೆ ಅದೇ ರೀತಿ, ಚಂದ್ರಯಾನ-3ಕ್ಕೂ ಕರುನಾಡಿನ ಕಾಣಿಕೆ ಅಪಾರ.ಈ ಜಗತ್ತು,ಭಾರತವನ್ನು ಕರ್ನಾಟಕದ ಮೂಲಕ ನೋಡುವ ಈ ಅವಿಸ್ಮರಣೀಯ ಕ್ಷಣದ ದೃಶ್ಯವನ್ನು ನಾನೂ ಕಣ್ತುಂಬಿಕೊಂಡೆ.ಉಡಾವಣೆಯಾದ ಕೆಲ ಕ್ಷಣಗಳಲ್ಲೇ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದ್ದು,ಈ ಮೂಲಕ ಉಪಗ್ರಹವನ್ನು ಚಂದ್ರನ ಮೇಲೆ ಇಳಿಸುವ 6 ವಾರಗಳ ರೋಮಾಂಚನಕಾರಿ ಮಿಷನ್’ಗೆ ಚಾಲನೆ ದೊರೆತಿದೆ.ಚಂದ್ರನತ್ತ ಹೊರಟ GSLV-Mk3 ರಾಕೆಟ್ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು 3 ನೆಯ ಬಾರಿ ಚಂದ್ರನತ್ತ ಇಸ್ರೋ ತನ್ನ ಪಯಣ ಆರಂಭಿಸಿದೆ.ಕೋಟ್ಯಾಂತರ ಭಾರತೀಯರ ಹಾರೈಕೆಯೊಂದಿಗೆ ನಭಕ್ಕೆ ಚಿಮ್ಮಿದ ಚಂದ್ರಯಾನ 3 ರಾಕೆಟ್ ಆಗಸ್ಟ್ 23 ಕ್ಕೆ ಚಂದ್ರನ ಅಂಗಳದಲ್ಲಿ ಕಾಲಿಡಲಿದೆ ಈ ಮಿಷನ್ ಸಾಧ್ಯವಾಗಿಸಲು ಹಗಲಿರುಳು ಶ್ರಮಿಸಿದ ಸಾವಿರಾರು ವಿಜ್ಞಾನಿಗಳು, ಎಂಜಿನಿಯರ್‌ಗಳು ಮತ್ತು ತಂತ್ರಜ್ಞರಿಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ವರದಿ:ಅಪ್ಪಾರಾಯ ಬಡಿಗೇರ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.