ಹನೂರು:ಕೊಳ್ಳೇಗಾಲ ತಾಲೂಕಿನ ತೆಳ್ಳನೂರು ಗ್ರಾಮದಲ್ಲಿ ನೂತನವಾಗಿ ಪಶುವೈದ್ಯಕೀಯ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಹನೂರು ಕ್ಷೇತ್ರದ ಶಾಸಕ ಎಂಆರ್ ಮಂಜುನಾಥ್ ಕ್ಷೇತ್ರದ ಹಲವೆಡೆ ವೈದ್ಯರಿಲ್ಲದ ಕಾರಣ ನಾನು ಈಗಾಗಲೇ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸಿ ಅವರ ಗಮನ ಸೆಳದಿದ್ದು ಮುಂದಿನ ದಿನಗಳಲ್ಲಿ ಕ್ಷೇತ್ರದ ಎಲ್ಲಾ ಸ್ಥಳಕ್ಕೂ ವೈದ್ಯರನ್ನು ನೇಮಿಸಲು ಸೂಚಿಸಲಾಗುವುದು ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು.
ಕೊಳ್ಳೇಗಾಲ ತಾಲ್ಲೂಕಿನ ತೆಳ್ಳನೂರು ಗ್ರಾಮದಲ್ಲಿ ಸುಮಾರು ಅಂದಾಜು ವೆಚ್ಚ ಮೂವತೈದು ಲಕ್ಷ ರೂಪಾಯಿ ಮೊತ್ತದಲ್ಲಿ ಆರ್ ಐ ಡಿ ಎಫ್ ಇಪ್ಪತ್ತನಾಲ್ಕರ ಅನುದಾನದ ಅಡಿಯಲ್ಲಿ ಕಟ್ಟಡವನ್ನು ಬಿಡುಗಡೆ ಮಾಡಲಾಗಿದ್ದು ಅದರಂತೆ ಇಂದು ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲಾಗಿದೆ ಇದರ ಸದುಪಯೋಗವನ್ನು ಸುತ್ತಮುತ್ತಲಿನ ಗ್ರಾಮಸ್ಥರು ಮಾಡಿಕೊಳ್ಳಲು ಶಾಸಕರು ತಿಳಿಸಿದರು .
ಈ ಸಂದರ್ಭದಲ್ಲಿ ಎನ್ ಪಿ ಸಿ ಸಿ ಎಲ್ ನಾಗರಾಜು ಇಂಜನಿಯರ್,ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶೋಭಾರಾಣಿ,ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೀತ ರಮೇಶ್,ಉಪಾಧ್ಯಕ್ಷೆ ಕೃಷ್ಣವೇಣಿ, ಸಂತೋಷ್,ಮುಖಂಡರುಗಳಾದ ಮಹೇಶ್,ರಮೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ-ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.