ಮುಂಡಗೋಡ : ಸ್ಥಳೀಯ ಜೆ ಎಂ ಎಫ್ ಸಿ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶೆ ಆದ ಧನವತಿ ಅವರು ಅನಿರೀಕ್ಷಿತವಾಗಿ ಮುಂಡಗೋಡ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ಇದೆ ವೇಳೆ ಮಕ್ಕಳ ತಜ್ಞ ವೈದ್ಯರು ಸೂಕ್ತ ವೇಳೆಗೆ ಬರುವುದಿಲ್ಲ ಎಂದು ಆಸ್ಪತ್ರೆಗೆ ಬಂದಿದ್ದ ಮಕ್ಕಳ ಪೋಷಕರು ನ್ಯಾಯಾಧೀಶರಲ್ಲಿ ದೂರಿತ್ತರು. ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕುರಿತು ನಿರ್ಲಕ್ಷ ವಹಿಸಿರುವುದನ್ನು ಕಂಡ ನ್ಯಾಯಾಧೀಶರು ಆಸ್ಪತ್ರೆ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಕಾನೂನು ಪ್ರಾಧಿಕಾರಕ್ಕೆ ಮುಂದಿನ ವರದಿ ಸಲ್ಲಿಸುವುದಾಗಿ ತಿಳಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.