ಬೆಂಗಳೂರು:ವಿಧಾನಸಭಾ ಮೊಗಸಾಲೆಯಲ್ಲಿ ನಡೆದ ಹೈಡ್ರಾಮಾದ ವೇಳೆ ಅಸ್ವಸ್ಥರಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಗ್ಯ ಸಂಪೂರ್ಣ ಸ್ಥಿರವಾಗಿದೆ ಎಂದು ಸ್ವತಃ ಶಾಸಕರೇ ಟ್ವೀಟ್ ಮಾಡಿದ್ದಾರೆ.
ನಾನು ಸಂಪೂರ್ಣವಾಗಿ ಗುಣಮುಖನಾಗಿದ್ದೆನೆ ಯಾರೂ ಭಯಪಡುವ ಅಗತ್ಯವಿಲ್ಲ ಜೈ ಶ್ರೀರಾಮ್ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಬರೆದುಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಾ|| ಅಬ್ದುಲ್ ಖಾದರ್ ಅವರು ತಲೆ ಸುತ್ತು ಬಂದ ಕಾರಣ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಮರ್ಜೆನ್ಸಿಗೆ ಬಂದರು ಇಸಿಜಿ,ಎಕೋ ನಾರ್ಮಲ್ ಇದೆ ಕಾರ್ಡಿಯಾಲಾಜಿಸ್ಟ್ ನೋಡಿದ್ದಾರೆ ಈಗ ನಾರ್ಮಲ್ ಆಗಿದ್ದಾರೆ. 24 ಗಂಟೆ ನಿಗಾ ಘಟಕದಲ್ಲಿ ಇರಬೇಕು ಬಿಪಿ ಹೆಚ್ಚಿದೆ ಆದಕಾರಣ ಅವರಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ವೈದ್ಯರು ಹೇಳಿದ್ದಾರೆ.
ಐಸಿಯುನಲ್ಲಿ ದಾಖಲು ಮಾಡಲಾಗಿದೆ ಚಿಕಿತ್ಸೆ ಮುಂದುವರಿಸಿದ್ದೇವೆ ವೈಟಲ್ ಪ್ಯಾರಮೀಟರ್ಸ್ ಸ್ಥಿರವಾಗಿದೆ ಎಂದು ಸಂಪೂರ್ಣ ಮಾಹಿತಿ ನೀಡಿದರು.
ಕುಸಿದು ಬಿದ್ದು ಶಾಸಕ:ಸದನದಲ್ಲಿ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಕಾರಣಕ್ಕೆ ಸ್ಪೀಕರ್ ಯುಟಿ ಖಾದರ್,10 ಬಿಜೆಪಿ ಶಾಸಕರನ್ನು ಅಮಾನತು ಬಳಿಕವೂ ಬಿಜೆಪಿ ಸದಸ್ಯರು ಸದನದೊಳಗೆ ಪ್ರತಿಭಟನೆ ನಡೆಸಿದರು.ಈ ವೇಳೆ ಮಾರ್ಷಲ್ ಗಳು ಅಮಾನತು ಆದ ಶಾಸಕರನ್ನು ಸದನದಿಂದ ಹೊರಗೆ ಹಾಕುವಾಗ ನೂಕಾಟ ತಳ್ಳಾಟ ಜೋರಾಗಿ,ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆವರಣದಲ್ಲಿ ಕುಸಿದು ಬಿದ್ದಿದ್ದಾರೆ ಕೂಡಲೇ ಅವರಿಗೆ ಚಿಕಿತ್ಸೆಗೆಂದು ಅಂಬುಲೆನ್ಸ್ ನಲ್ಲಿ ಪೋಟರ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು.
ವರದಿ ರಾಜಶೇಖರ ಮಾಲಿ ಪಾಟೀಲ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.