ಭದ್ರಾವತಿ: ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುವವರಿಂದ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರತಿ ವಾರಾಂತ್ಯ ದಿನಗಳಲ್ಲಿ ಭದ್ರಾವತಿ ಸಂಚಾರಿ ಠಾಣೆ ಪೊಲೀಸರು ವಿಶೇಷ ಕಾರ್ಯಚರಣೆ ನಡೆಸುತ್ತಿದ್ದಾರೆ.
ಅದೇ ರೀತಿ ಕಾರ್ಯಾಚರಣೆ ನಡೆಸಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ದ್ವಿಚಕ್ರ ವಾಹನ ಸವರರ ವಿರುದ್ದ ಪ್ರಕರಣ ದಾಖಲಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮೊದಲನೇ ಕಿರಿಯ ನ್ಯಾಯಾಲಯದ ನ್ಯಾಯಾಧೀಷರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ 5 ಬೈಕ್ ಸವಾರರಿಗೆ ತಲಾ 10.000 ರೂ. ನಂತೆ ಒಟ್ಟು 50.000 ರೂ. ದಂಡ ವಿಧಿಸಿರುತ್ತಾರೆ.
