ಕಲಬುರಗಿ:ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು,ಮುಂದಿನ ಒಂದು ವಾರ ಕೂಡಾ ನಿರಂತರ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಕಲಬುರಗಿ ಜಿಲ್ಲಾಡಳಿತಕ್ಕೆ ಮುನ್ಸೂಚನೆ ಹಾಗೂ ಎಚ್ಚರಿಕೆಯನ್ನು ನೀಡಿದೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟ ಹಿನ್ನೆಲೆ ಕಲಬುರಗಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು ಜಿಲ್ಲೆಯ ನದಿ,ಕೆರೆ,ಹಳ್ಳದ ದಂಡೆಗೆ ಸಾರ್ವಜನಿಕರು ತೆರಳದಂತೆ ಕಲಬುರಗಿ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.
ನದಿ ದಂಡೆಗೆ ಜಾನುವಾರುಗಳನ್ನು ಬಿಡಬಾರದು, ದಡದ ಬಳಿ ಬಟ್ಟೆ ಸ್ವಚ್ಛಗೊಳಿಸುವುದು ಈಜಾಡುವುದನ್ನು ಮಾಡಬಾರದು,ಅಪಾಯವಿರುವ ಸೇತುವೆಗಳಿಂದ ಮೇಲೆ ಸಂಚರಿಸಬಾರದು ಎಂದು ಜಿಲ್ಲಾಧಿಕಾರಿ ಸೂಚನೆಯನ್ನು ನೀಡಿದ್ದಾರೆ ಇನ್ನು ತಗ್ಗು ಪ್ರದೇಶ ಹಾಗೂ ನದಿ ಪ್ರದೇಶದ ಜನರು ಪ್ರವಾಹಕ್ಕೊಳಗಾಗುವ ಸಂದರ್ಭ ಹಿನ್ನೆಲೆ ಅವರನ್ನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ವರದಿ:ಅಪ್ಪಾರಾಯ ಬಡಿಗೇರ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.