ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ ಕೆ.ಹೊಸಹಳ್ಳಿ ಹಳೆಯ ವಿದ್ಯಾರ್ಥಿಗಳ ವತಿಯಿಂದ ಸನ್ಮಾನ

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ವನಸಿರಿ ಅಮರೇಗೌಡ ಮಲ್ಲಾಪೂರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಅಮರೇಗೌಡ ಮಲ್ಲಾಪೂರ ಅವರು ಶ್ರೀ ನಾಗಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ಆರ್ಶೀವಾದ ಪಡೆದು ದೇವಸ್ಥಾನದ ರಸ್ತೆಯ ಅಕ್ಕಪಕ್ಕದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ನೆಟ್ಟಿರುವ ಸಸಿಗಳನ್ನು ಮತ್ತು ಹಳೆಯ ವಿದ್ಯಾರ್ಥಿಗಳ ವತಿಯಿಂದ ಶಾಲೆಯ ಆವರಣದಲ್ಲಿ ಪೋಷಿಸಿ ಬೆಳಸಲಾದ ಸಸಿಗಳನ್ನು ವೀಕ್ಷಣೆ ಮಾಡಿ ಪ್ರಶಂಶೆ ವ್ಯಕ್ತಪಡಿಸಿ ಕೆ.ಹೊಸಹಳ್ಳಿ ಹಳೆಯ ವಿದ್ಯಾರ್ಥಿ ಸಂಘದ ಸದಸ್ಯರು ಪರಿಸರ ರಕ್ಷಕರು ಅವರ ಕಾರ್ಯ ತುಂಬಾ ಶ್ಲಾಘನೀಯ ಅವರ ಸೇವೆ ನಿರಂತವಾಗಿರಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ,ವನಸಿರಿ ಫೌಂಡೇಶನ್ ಜಾಲತಾಣದ ಅದ್ಯಕ್ಷ ಚನ್ನಪ್ಪ ಕೆ.ಹೊಸಹಳ್ಳಿ, ಮಸ್ಕಿ ತಾಲೂಕ ಅದ್ಯಕ್ಷ ರಾಜು ಬಳಗಾನೂರ,ಮುಖ್ಯ ಗುರುಗಳಾದ ಹನುಮಂತಗೌಡ, ಶಿಕ್ಷಕರಾದ ದೊಡ್ಡಪ್ಪ, ಛತ್ರಪ್ಪ,ಹುಸೇನ್ ಸಾಬ್, ಕಲ್ಲನಗೌಡ,ಪರ್ವಿನ್,ಹಳೆಯ ವಿದ್ಯಾರ್ಥಿಗಳಾದ ಅಹಮ್ಮದ್ ಹುಸೇನ್,ವೀರೇಶ ಬಡಿಗೇರ,ರಮೇಶ ಉಳ್ಳಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ