ಔರಾದ:ತಾಲೂಕಿನ ಕೌಠ(ಬಿ)ಪಂಚಾಯತನಲ್ಲಿ ಅವ್ಯವಹಾರ ನಡೆದಿದೆ ಎಂದು ಕೆಲದಿನಗಳಿಂದ ದೂರುತ್ತಿರುವ ಗಡಿಕುಶುನೂರ ಗ್ರಾಮ ಪಂಚಾಯತ ಸದಸ್ಯರಾದ ಪ್ರದೀಪ ಎನಗುಂದ ವಿರುದ್ದ ಶಿಸ್ತು ಕ್ರಮಕ್ಕೆ ಆಗ್ರಹಿಸಿ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಕೌಠ(ಬಿ) ಗ್ರಾಮ ಪಂಚಾಯತ ಸದಸ್ಯರು ದೂರು ನೀಡಿದ್ದಾರೆ.
ಗಡಿಕುಶುನೂರ ಗ್ರಾಮ ಪಂಚಾಯತ ಸದಸ್ಯರಾದ ಪ್ರದೀಪ ಎನಗುಂದ ರವರು ಉದೇಶ ಪೂರ್ವಕವಾಗಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಯವರ ಮೇಲೆ ಹಾಗೂ ಇತರ ಎಲ್ಲಾ ಸಿಬ್ಬಂದಿಗಳ ಮೇಲೆ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಪ್ರತಿದಿನ ಅಧಿಕಾರಿಗಳ ಮೇಲೆ ಇಲ್ಲ-ಸಲ್ಲದ ಆರೋಪ ಮಾಡಿ ಮಾನಸಿಕವಾಗಿ ಚಿತ್ರಹಿಂಸೆ ನೀಡುತ್ತಿದ್ದಾರೆ.
ಪ್ರತಿಯೊಂದು ಕೆಲಸಕ್ಕೂ ಅಡ್ಡಗಾಲು ಹಾಕುತ್ತಿದ್ದಾರೆ, ಗ್ರಾಮ ಪಂಚಾಯತ ಸಿಬ್ಬಂದಿಗಳು ಪ್ರತಿದಿನ ಕೆಲಸಕ್ಕೆ ಬರಲು ಭಯಪಡುತ್ತಿದ್ದಾರೆ ಎಂದು ಸದಸ್ಯರು ದೂರಿದ್ದಾರೆ.
ಇವರ ನಡವಳಿಕೆಯಿಂದ ಗ್ರಾಮಗಳ ಅಭಿವೃದ್ಧಿ ಕುಂಟಿತವಾಗಿದೆ ಹೀಗಾಗಿ 14-6-2023 ಮಾನ್ಯ ಅಧ್ಯಕ್ಷರ ಆದೇಶದ ಮೇರೆಗೆ ಗ್ರಾಮ ಪಂಚಾಯತನ ಸಾಮಾನ್ಯ ಸಭೆಯಲ್ಲಿ ಈ ಸಂಬಂಧ ಚರ್ಚಿಸಿ ಸದಸ್ಯರಾದ ಪ್ರದೀಪ ಎನಗುಂದ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ನಿರ್ಧರಿಸಿ,ಇಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬೀರೇಂದ್ರ ಸಿಂಗರವರಿಗೆ ದೂರ ನೀಡಿದ್ದವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೌಠ(ಬಿ) ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಉಪಾದ್ಯಕ್ಷರಾದ ಶಾಂತಮ್ಮಾ ಸದಸ್ಯರಾದ ಶಿವಕುಮಾರ,ಜಗನಾಥ, ಇಮಲಾಬಾಯಿ,ಸತೀಶ ಇದ್ದರು.
ವರದಿ:ಅಮರ ಮುಕ್ತೆದಾರ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.