ಯಾದಗಿರಿ:ಕಳೆದ ನಾಲ್ಕು ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮನೆಗಳು ಹಾನಿಯಾಗಿದ್ದು ಶಹಾಪುರ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮನೆಗಳು ಬಿದ್ದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು,ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅಭಿಯಂತರರು ಜಂಟಿಯಾಗಿ ಸಮೀಕ್ಷೆ ಮಾಡಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದರು.ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮಕ್ಕೆ ಭೇಟಿ ನೀಡಿ ಹಾನಿಯಾದ ಮನೆಗಳನ್ನು ಪರಿಶೀಲಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಸತತವಾಗಿ ಮಳೆ ಬರುತ್ತಿರುವುದರಿಂದ ನೀರಿಗೆ ಮತ್ತು ಗ್ರಾಮೀಣ ಭಾಗದ ಹಳ್ಳ,ಕೆರೆ,ನದಿ ನೀರಿನ ಒಳಹರಿವು ಹೆಚ್ಚಳವಾಗಿದೆ ಅದರಿಂದಾಗಿ ನಗರ ಮತ್ತು ಗ್ರಾಮೀಣ ಭಾಗದ ಗ್ರಾಮಸ್ಥರು ನದಿಗೆ ಇಳಿಯದಂತೆ ಹಾಗೂ ಜಾನುವಾರುಗಳ ನದಿಯ ಸಮೀಪ ಕರೆದುಕೊಂಡು ಹೋಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಾಲೂಕ ಅಧಿಕಾರಿಗಳಿಗೆ ಸೂಚಿಸಿದರು.ಶಹಾಪುರ ತಾಲೂಕಿನಲ್ಲಿ ಒಟ್ಟು 27 ಮನೆಗಳು ಮಳೆಯಿಂದ ಹಾನಿಯಾಗಿವೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು ಮದ್ರಿಕಿ ಗ್ರಾಮದಲ್ಲಿನ ಬಾಪೂಜಿ ಕೇಂದ್ರಕ್ಕೆ ಭೇಟಿ ನೀಡಿ ಗೃಹಲಕ್ಷ್ಮೀ ಯೋಜನೆಯಡಿ ಅರ್ಜಿ ಸಲ್ಲಿಸುತ್ತಿರುವ ಅರ್ಹ ಫಲಾನುಭವಿಗಳ ಕುರಿತು ಮಾಹಿತಿ ಪಡೆದರು.ಫಲಾನುಭವಿಗಳಿಗೆ ರಾಜ್ಯ ಸರ್ಕಾರವೇ ಸಂದೇಶ ಕಳುಹಿಸಲಿದ್ದು ಅಂತವರು ಮಾತ್ರ ನಿಗದಿತ ಕೇಂದ್ರಕ್ಕೆ,ನಿಗದಿತ ಸಮಯಕ್ಕೆ ತೆರಳಿ ಅರ್ಜಿ ಸಲ್ಲಿಸಬೇಕು ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಮತ್ತು ಯೋಜನೆಯಡಿಯಲ್ಲಿ ನೊಂದಾಯಿಸುವ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ ಎಂದು ತಿಳಿಸಬೇಕೆಂದು ಬಾಪೂಜಿ ಕೇಂದ್ರದ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು ಇದೇ ಸಂದರ್ಭದಲ್ಲಿ ಶಹಾಪುರ ದಂಡಾಧಿಕಾರಿ ಉಮಾಕಾಂತ ಹಳ್ಳಿ ಸೇರಿದಂತೆ ತಾಲೂಕ ಅಧಿಕಾರಿಗಳ ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ