ಬಳ್ಳಾರಿಯ ಪತ್ರಿಕಾ ಭವನದಲ್ಲಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು ಈ ಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತರ ವಿರುದ್ಧ ಹೇಳಿಕೆ ನೀಡುತ್ತಿರುವ ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳು ತಮ್ಮ ಹೇಳಿಕೆಗಳಿಂದ ಮಾಹಿತಿ ಹಕ್ಕು ಕಾರ್ಯಕರ್ತರ ಬಗ್ಗೆ ಜನಸಾಮಾನ್ಯರಲ್ಲಿ ಮತ್ತು ಅಧಿಕಾರಿಗಳಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತರು ಎಂದರೆ ಕೆಟ್ಟ ಭಾವನೆ ಮಾಡುತ್ತಿದೆ ಮತ್ತು ಕೆಲವೊಂದು ಕಡೆ ಮಾಹಿತಿ ಹಕ್ಕು ಕಾರ್ಯಕರ್ತರ ಮೇಲೆ ಹಲ್ಲೆಯಾಗುತ್ತಿದೆ ಹೀಗಾಗಿ ಅಸಂಬದ್ಧ ಹೇಳಿಕೆ ನೀಡಿದಂತೆ ರಾಜಕಾರಣಿಗಳಿಗೆ ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಎಚ್ಜಿ ರಮೇಶ್ ಕುಣಿಗಲ್,ರಾಜ್ಯ ಕಾರ್ಯಾಧ್ಯಕ್ಷರಾದ ಚನ್ನಯ್ಯ ವಸ್ತ್ರದ,ರಾಜ್ಯ ಸಮಿತಿಯ ಬಳ್ಳಾರಿ ವಲಯದ ಸಂಘಟನಾ ಕಾರ್ಯದರ್ಶಿ ಎಚ್ ರಾಜಕುಮಾರ್,ವಿಜಯನಗರ ಜಿಲ್ಲಾಧ್ಯಕ್ಷರಾದ ರಾಮಕೃಷ್ಣ ಕಣಿವೆಹಳ್ಳಿ,ಬಳ್ಳಾರಿ ಜಿಲ್ಲಾ ಅಧ್ಯಕ್ಷರಾದ ದೇವೇಶ ಹಿರೇಮಠ್,ಸೋಮಶೇಖರಯ್ಯ ಹಿರೇಮಠ,ನಾಗಿರೆಡ್ಡಿ ಚಿತ್ರದುರ್ಗ ಮತ್ತು ಹಲವಾರು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
