ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಸಂತೆ ನಡೆಯುವ ಸ್ಥಳದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಗೆ ರಸ್ತೆಯು ಕೆಸರುಗದ್ದೆಯಂತಾಗಿದೆ
ನೀರು ಸರಿಯಾಗಿ ಹರಿದು ಹೋಗದೇ ಇರುವುದು ಇದಕ್ಕೆ ಕಾರಣ.ಇದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ರೋಗ ರುಜಿನಗಳಿಗೆ ಆಹ್ವಾನ ನೀಡಿದಂತಾಗಿದೆ.
ವ್ಯಾಪಾರ ವಹಿವಾಟು ನಡೆಸುವ ಸ್ಥಳ ವ್ಯವಸ್ಥಿತ ರೀತಿಯಲ್ಲಿ ಇದೆ,ನೆಲಕ್ಕೆ ಸಿಮೆಂಟ್ ಕಾಂಕ್ರೀಟ್ ಚಾವಣಿ ಇದೆ ರಸ್ತೆಯ ವ್ಯವಸ್ಥೆ ಸಮರ್ಪಕವಾಗಿಲ್ಲ
ಅದರಿಂದಾಗಿ ನೀರು ಸರಿಯಾಗಿ ಹರಿದು ಕಾಲುವೆ ಸೇರದೆ ಇರುವುದು ಇದಕ್ಕೆಲ್ಲಾ ಕಾರಣ ಇನ್ನಾದರೂ
ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಬೇಕು.
ವರದಿ-ಪ್ರಭಾಕರ ಡಿ ಎಂ ಹೊನ್ನಾಳಿ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.