ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ಹಸೇನ್ ಹುಸೇನ ದೇವರುಗಳನ್ನು ಪ್ರತಿಷ್ಠಾಪಿಸಿ ಮೊಹರಂ ಹಬ್ಬದ ಆಚರಣೆ ಅದ್ದೂರಿಯಾಗಿ ನಡೆಯುತ್ತಿದೆ ಈ ಕಾರ್ಯಕ್ರಮದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ಅಲಾಯಿ ಕುಣಿತ ಹಾಗೂ ಮೊಹರಂ ಕವಾಲಿ ಪದಗಳು ರಾತ್ರಿ 10 ಗಂಟೆಯಿಂದ ಬೆಳಿಗ್ಗೆವರೆಗೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತದೆ ಹಾಗೂ ಹಸೆನ ಹುಸೇನರ ತ್ಯಾಗದ ಪ್ರತಿಫಲವೇ ಮೋಹರಂ ಹಬ್ಬದ ಆಚರಣೆಯಾಗಿದೆ ಪ್ರತಿ ವರ್ಷ ಬಿಳವಾರ ಗ್ರಾಮದಲ್ಲಿ ಮೊಹರಂ ಹಬ್ಬದ ಆಚರಣೆ ಅದ್ದೂರಿಯಾಗಿ ನಡೆಸಲಾಗುತ್ತದೆ ಎಂದು ಶ್ರೀ ಶರೀಫಸಾಬ ನದಾಫ್ ಯಡ್ರಾಮಿ ತಾಲೂಕಿನ ಕಾಂಗ್ರೆಸ್ ಯುವ ಮುಖಂಡರು ಬಿಳವಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
