ಹನೂರು:ವಿಧಾನಸಭಾ ವ್ಯಾಪ್ತಿಯ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿಯ ಅಧ್ಯಕ್ಷರುಗಳಿಗೆ ಶಾಸಕ ಎಂ ಆರ್ ಮಂಜುನಾಥ ಸನ್ಮಾನಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ನೂತನವಾಗಿ ಆಯ್ಕೆಯಾದ ಸತ್ತೇಗಾಲ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸದಸ್ಯರುಗಳಿಂದ ಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿದ ಶಾಸಕ ಎಂ.ಆರ್.ಮಂಜುನಾಥ್ ಹನೂರು ವಿಧಾನಸಭಾ ಕ್ಷೇತ್ರ ರಾಜ್ಯದಲ್ಲೇ ಮೊದಲ ಬಾರಿಗೆ ಪ್ರವಾಸಿ ತಾಣವನ್ನು ಹೊಂದಿರುವ ಕ್ಷೇತ್ರವಾಗಿದೆ ಇನ್ನಷ್ಟು ಅಭಿವೃದ್ಧಿ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಂಬಂಧ ಪಟ್ಟ ಇಲಾಖೆ ಯೋಜನೆ ಚರ್ಚಿಸಿ ಸಮರ್ಪಕವಾಗಿ ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಶ್ರಮ ವಹಿಸಲಾಗುವದು ಎಂದು ತಿಳಿಸಿದರು ನೂತನವಾಗಿ ಆಯ್ಕೆಯಾದಂತಹ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ,ಮಣಗಳ್ಳಿ ಪಂಚಾಯಿತಿ ಅಧ್ಯಕ್ಷ ಸಿ ಜಿ ಸೋಮಶೇಖರ್ ಶೇಖರ್,ಸುಳ್ಳೇರಿ ಪಾಳ್ಯದ ಗ್ರಾಮ ಪಂಚಾಯತಿ ಅಧ್ಯಕ್ಷ ಮುತ್ತುರಾಜು ಹಾಗೂ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಸನ್ಮಾನವನ್ನು ಮಾಡಲಾಯಿತು.
ನೂತನ ಅಧ್ಯಕ್ಷ ಕೆಂಪರಾಜು ಮಾತನಾಡಿ ಗ್ರಾಮ ಪಂಚಾಯತಿ ಸರ್ವ ಸದಸ್ಯರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮದ ಅಭಿವೃದ್ಧಿಗಾಗಿ ಪಣ ತೊಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಎಂ ಎಸ್ ಸುವರ್ಣ,ಸದಸ್ಯರುಗಳಾದ ದೇವಮ್ಮ,ರವಳಪ್ಪ ಮಲ್ಲಮ್ಮ ಲತಾ ರಾಮೇಗೌಡ ದೇವಮ್ಮ,ಸುಮಾ ಮಹೇಶ್,ತಮ್ಮಯ್ಯ,ವಿಜಯ್ ಕುಮಾರ್,ಮುಖಂಡರುಗಳಾದ ಮಂಜೇಶ್,ರಾಜು, ನಂಜುಂಡ ಇನ್ನು ಮುಂತಾದವರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.