ಚಿಕ್ಕಬಳ್ಳಾಪುರ:ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಾಗೂ ಮಹಿಳೆಯರ ಬೆತ್ತಲೆ ಮೆರವಣಿಗೆ ಅತ್ಯಾಚಾರ ಪ್ರಕರಣ ಮನುಕುಲ ಹಾಗೂ ಸಮಾಜ ತಲೆ ತಗ್ಗಿಸುವ ವಿಚಾರ ಇದನ್ನು ಖಂಡಿಸಿ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ ಸಂಸ್ಥೆಯ ವತಿಯಿಂದ ನಗರದ ಹೊರವಲಯದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಮಹಿಳೆಯರ ಬೆತ್ತಲೆ ಮೆರವಣಿಗೆಯನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು ಅತ್ಯಂತ ಹೇಯ ಕೃತ್ಯವಾಗಿದೆ ಸಂತ್ರಸ್ತರ ಗುರುತನ್ನು ಬಹಿರಂಗ ಪಡಿಸುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವ ದುಷ್ಕರ್ಮಿಗಳು ಮುಗ್ಧ ಮಹಿಳೆಯರಲ್ಲಿ ಮತ್ತಷ್ಟು ಭಯಾನಕತೆಯನ್ನು ಹುಟ್ಟು ಹಾಕಲು ಹಾಗೂ ಅವರು ಮಾನಸಿಕವಾಗಿ ಕುಗ್ಗಿ ಯಾತನೆ ಅನುಭವಿಸುವಂತೆ ಮಾಡುವ ದುರುದ್ದೇಶ ಹೊಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಮಣಿಪುರದಲ್ಲಿ ಎರಡು ತಿಂಗಳ ಕಾಲ ನಡೆದ ಅಶಾಂತಿಯ ಘಟನೆ ಬಗ್ಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟವು ತೀವ್ರ ಕಳವಳ ವ್ಯಕ್ತಪಡಿಸುತ್ತಿವೆ ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಹಿಂಸಾಚಾರ ಪ್ರಕರಣಗಳ ಬಗ್ಗೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಕ್ರಿಯೆ ಕೊಡದೆ ಹಾಗೂ ಯಾವುದೇ ರೀತಿಯ ಕ್ರಮ ಜರುಗಿಸದೆ ಕೈಕಟ್ಟಿ ಕುಳಿತಿರುವುದು ದೇಶದ ಜನರ ತಾಳ್ಮೆ ಕೆಣಕುವಂತಾಗಿದೆ ದೇಶದ ಪ್ರಧಾನ ಸೇವಕ ಎಂದು ಹೇಳಿಕೊಳ್ಳುವ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ವಿಚಾರದಲ್ಲಿ ಮಾಡಿದ್ದಾದರೂ ಏನು ಎಂದು ಪ್ರಶ್ನೆ ಮಾಡಿರುವ ಅವರು ಮಹಿಳೆಯರ ರಕ್ಷಣೆಗೆ ಮುಂದಾಗಿಲ್ಲ ಎಂದಾದರೆ ಪ್ರಧಾನಿ ಹುದ್ದೆಯಲ್ಲಿ ಅವರು ಇರಲು ಯೋಗ್ಯರಲ್ಲ ಕೂಡಲೇ ಮಣಿಪುರ ವಿಚಾರದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿ ಮಣಿಪುರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಶೀಘ್ರ ರಾಷ್ಟ್ರಪತಿ ಆಡಳಿತ ಮಣಿಪುರದಲ್ಲಿ ಜಾರಿಯಾಗಿ ಶಾಂತಿಯ ವಾತಾವರಣ ನಿರ್ಮಾಣವಾಗಲಿ ಎಂದು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ.ನಂದಿ ಭಾಷಾ ರಾಜ್ಯ ಕಾರ್ಯದರ್ಶಿ ಹಾಶಿಂ ಬನ್ನೂರು ಜಿಲ್ಲಾಧ್ಯಕ್ಷ ವಿ ರಾಜಶೇಖರ ತಾಲ್ಲೂಕು ಸಮಿತಿ ಕೆ.ಎಂ ಫಜಲುಲ್ಲಾ ಜಯಕುಮಾರ್ ಡಿ.ಎಸ್.ಎಸ್ ರಾಜ್ಯ ಸಂಚಾಲಕರಾದ ಬಿ.ಎನ್.ಗಂಗಾಧರ ಹಾಗೂ ಜಿಲ್ಲಾ ಮತ್ತು ತಾಲೂಕು ನೇತಾರರು ಪಾಲ್ಗೊಂಡಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.