ಮೈಸೂರು :- ಈ ಬಾರಿಯ ದಸರಾ ಮಹೋತ್ಸವವನ್ನು ರಾಜ್ಯ ಸರ್ಕಾರ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದು ಕನ್ನಡ ಕ್ರಾಂತಿದಳ ಅಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಅಭಿನಂದಿಸಿದ್ದಾರೆ.
ಈ ಬಾರಿಯ ದಸರಾ ಮಹೋತ್ಸವವನ್ನು ಸುತ್ತೂರು ಮಠಾಧೀಶರಾದ ದೇಶಿಕೇಂದ್ರ ಮಹಾಸ್ವಾಮೀಜಿಯವರಿಂದ ಉದ್ಘಾಟನೆ ಮಾಡಿಸಲು ಕೆ.ಆರ್.ಕ್ಷೇತ್ರದ ಶಾಸಕರು ಪ್ರಸ್ತಾವನೆ ಸಲ್ಲಿಸಿರುವುದು ಸ್ವಾಗತಾರ್ಹ ಎಂದು ಅವರು ಹೇಳಿದ್ದಾರೆ
ಸುತ್ತೂರು ಶ್ರೀ ಕ್ಷೇತ್ರಕ್ಕೆ ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿದೆ.ಸುತ್ತೂರು ಮಠವು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟುಮಾಡುತ್ತಿದೆ.
ಸುತ್ತೂರು ಶ್ರೀ ಮಠದ ದೇಶಿಕೇಂದ್ರ ಸ್ವಾಮೀಜಿ ಅವರು ದಸರಾ ಉದ್ಘಾಟನೆಗೆ ಸೂಕ್ತ ಮತ್ತು ಶ್ರೀಗಳು ಮೈಸೂರಿನವರೆ ಆಗಿರುವುದು ನಮಗೆಲ್ಲ ಹೆಮ್ಮೆಯ ವಿಷಯ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇರೆ ಹೆಸರನ್ನು ಪರಿಗಣಿಸದೆ ಸುತ್ತೂರು ಶ್ರೀ ಗಳಿಂದಲೇ ದಸರಾ ಮಹೋತ್ಸವವನ್ನು ಉದ್ಘಾಟನೆ ಮಾಡಿಸಬೇಕೆಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.