ಶಹಾಪುರ:ದಿನ ಸಾವಿರಾರು ವಾಹನಗಳು ಸಂಚರಿಸುವ ರಾಜ್ಯ ಹೆದ್ದಾರಿ ಶಹಾಪುರ ನಗರದ ಚೌಕ್ ವೃತ್ತದಲ್ಲಿ ಒಳಚರಂಡಿ ಮುಚ್ಚದೆ ಇರುವ ಲೋಕೋಪಯೋಗಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಳೆದ ಎರಡು ತಿಂಗಳಿಂದಲೂ ವಾಹನಗಳ ಸಂಚಾರಕ್ಕೆ ತೊಂದರೆ ಆಗುತ್ತಿದೆ ವಾಹನ ಸವಾರರು ಈ ಸರ್ಕಲ್ ದಾಟಬೇಕಾದರೆ ಒಂದು ತಾಸು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಆದರೂ ಲೋಕೋಪಯೋಗಿ ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಇರುವುದು ವಿಪರ್ಯಾಸ.
ಶಹಾಪುರ ಪೋಲಿಸ್ ಠಾಣೆಯ ಅಧಿಕಾರಿಗಳು ಸಲಿಕಿಗಳನ್ನು ಹಿಡಿದು ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ.ಪೋಲಿಸ್ ಅಧಿಕಾರಿಗಳ ಕರ್ತವ್ಯ ನಿಷ್ಠೆ ನೋಡಿ ಶಹಾಪುರ ನಗರದ ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಲೋಕೋಪಯೋಗಿ ಅಧಿಕಾರಿಗಳು ಈಗಲಾದರೂ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಒಳಚರಂಡಿ ಕಾಮಗಾರಿ ಕಳಪೆಯಾಗಿದೆ ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಕಲ್ಯಾಣ ಕರ್ನಾಟಕ ಅಧ್ಯಕ್ಷರಾದ ವೆಂಕಟೇಶ್ ಆಲೂರ ಅವರು ಲೋಕೋಪಯೋಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ